*43 ವರ್ಷಗಳ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ: *ದೇವಿಯ ಮಂಟಪ ಸ್ಥಳದಲ್ಲಿ ಚನ್ನರಾಜ ಹಟ್ಟಿಹೊಳಿ ಪೂಜೆ

MK HasiruKranti
*43 ವರ್ಷಗಳ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ:   *ದೇವಿಯ ಮಂಟಪ ಸ್ಥಳದಲ್ಲಿ ಚನ್ನರಾಜ ಹಟ್ಟಿಹೊಳಿ ಪೂಜೆ
WhatsApp Group Join Now
Telegram Group Join Now
ಬೆಳಗಾವಿ:
ಸುಮಾರು 43 ವರ್ಷಗಳ ದೀರ್ಘ ವಿರಾಮದ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ, ಗ್ರಾಮದಲ್ಲಿ ಧಾರ್ಮಿಕ ಉತ್ಸಾಹ ಮತ್ತು ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದೆ.
ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ದೇವಿಯ ಮಂಟಪ ಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ದೇವಿಯ ಅನುಗ್ರಹದಿಂದ ಜಾತ್ರಾ ಮಹೋತ್ಸವವು ಯಾವುದೇ ಅಡಚಣೆಗಳಿಲ್ಲದೆ, ಭಕ್ತಿಪೂರ್ವಕವಾಗಿ ಮತ್ತು ಯಶಸ್ವಿಯಾಗಿ ನೆರವೇರಲಿ ಎಂದು ಪ್ರಾರ್ಥಿಸಿದರು.
ಗ್ರಾಮದ ಜನತೆ ಮತ್ತು ಭಕ್ತರ ಬಹುಕಾಲದ ನಿರೀಕ್ಷೆಯಾಗಿದ್ದ ಈ ಜಾತ್ರಾ ಮಹೋತ್ಸವ, ಇದೀಗ ಮತ್ತೆ ಆರಂಭಗೊಳ್ಳುತ್ತಿರುವುದು ಗ್ರಾಮಸ್ಥರಲ್ಲಿ ಅಪಾರ ಸಂತಸ ಮೂಡಿಸಿದೆ.
ಈ ಸಂದರ್ಭದಲ್ಲಿ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ದೇವಿಯ ಮಂಟಪ ಸ್ಥಳದಲ್ಲಿ ನಡೆದ ಪೂಜಾ ವಿಧಿಗಳು ಭಕ್ತರಲ್ಲಿ ವಿಶೇಷ ಭಾವನಾತ್ಮಕ ಸ್ಪಂದನೆ ಮೂಡಿಸಿವೆ.
ಗ್ರಾಮದ ಹಿರಿಯರು, ಪಂಚ ಕಮಿಟಿಯ ಮುಖಂಡರು, ಯುವಕರು, ಮಹಿಳೆಯರು ಹಾಗೂ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಜಾತ್ರೆಯ ಯಶಸ್ಸಿಗಾಗಿ ಪ್ರಾರ್ಥಿಸಿದರು.
.
WhatsApp Group Join Now
Telegram Group Join Now
Share This Article