ಬೆಂಗಳೂರು:09. ಬಸವನನಾಡು, ಸೂಫಿಸಂತರ ನೆಲೆಬೀಡು ಬೀದರನಲ್ಲಿ ಇದೇ 11 ಮತ್ತು 12 ರಂದು ಕೆಯುಡಬ್ಲ್ಯೂಜೆ ಆಯೋಜಿಸಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ ಖಂಡ್ರೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು
ಸಿಎಂ ನಿವಾಸದಲ್ಲಿ ಭೇಟಿ ಮಾಡಿ ಆಹ್ವಾನ ನೀಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಸಮ್ಮೇಳನಕ್ಕೆ ಬರುವ ಆಶ್ವಾಸನೆಯನ್ನು ನೀಡಿದ್ದಾರೆ.


