ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇಲ್ಲ-ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ ಗ್ರಾಮೀಣ- ನಗರ ಭಾಗದಲ್ಲಿ ಕುಡಿಯುವ ನೀರಿಗೆ ಅನುದಾನದ ಕೊರತೆಯೂ ಇಲ್ಲ

MK HasiruKranti
ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇಲ್ಲ-ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ ಗ್ರಾಮೀಣ- ನಗರ ಭಾಗದಲ್ಲಿ ಕುಡಿಯುವ ನೀರಿಗೆ ಅನುದಾನದ ಕೊರತೆಯೂ ಇಲ್ಲ
WhatsApp Group Join Now
Telegram Group Join Now
ವಿಜಯಪುರ,ಏ.೯ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ. ಅದರಂತೆ, ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣಿಸಬಹುದಾದ ೧೧ ತಾಲೂಕುಗಳ ೩೮ ಗ್ರಾಮ ಪಂಚಾಯತಿ ವ್ಯಾಪ್ತಿಯ ೬೫ ಗ್ರಾಮಗಳನ್ನು ಗುರುತಿಸಲಾಗಿದೆ.  ಅವುಗಳಲ್ಲಿ ನೀರಿನ ಯಾವುದೇ ಸಮಸ್ಯೆ ಉಂಟಾಗದಂತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏ.೯ರ ಇದೇ ದಿನ ಆಲಮಟ್ಟಿ ಜಲಾಶಯದಲ್ಲಿ ಕಳೆದ ವರ್ಷ ೨೯.೭೧೨ ಟಿಎಂಸಿ ನೀರಿತ್ತು, ಪ್ರಸ್ತುತ ೩೪.೮೯೫ ಟಿಎಂಸಿ ಅಂದರೆ ಅಂದಾಜು ೫.೧೮೩ ಟಿಎಂಸಿ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ ತಿಳಿಸಿದರು. ನಾರಾಯಣಪುರ ಜಲಾಶಯದಲ್ಲಿ ಕಳೆದ ವರ್ಷ  ೧೯.೫೯೫ ಟಿಎಂಸಿ, ಪ್ರಸ್ತುತ ೨೧.೨೬೯  ಟಿಎಂಸಿ ಅಂದರೆ ಅಂದಾಜು ೧.೬೭೪ ಟಿಎಂಸಿ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ. ಜಿಲ್ಲೆಯ ಬೇಡಿಕೆಯಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಇಂಡಿ ತಾಲೂಕಿನ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಲುವಾಗಿ ಇಂಡಿ ಶಾಖಾ ಕಾಲುವೆಯಿಂದ ೧.೦೦ ಟಿಎಂಸಿ ನೀರನ್ನು ಏ. ೧೧ ರಿಂದ ಏ. ೨೩ ರವರೆಗೆ (೧೨ ದಿನಗಳು) ನಿತ್ಯ ಒಂದು ಸಾವಿರ ಕ್ಯೂಸೆಕ್ ನಂತೆ ಹರಿಸಲು ಆದೇಶಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ೧೬೦ ಕೆರೆಗಳಿದ್ದು, ಅವುಗಳಲ್ಲಿ ೬೬ ಕೆರೆಗಳು ಶೇ. ೩೦ ರಷ್ಟು ,  ೪೩ ಕೆರೆಗಳು ಶೇ. ೩೧ ರಿಂದ ೫೦ ರವರೆಗೆ ಹಾಗೂ ೫೧ ಕೆರೆಗಳು ಶೇ. ೫೧ ರಿಂದ ೯೯ ರವರೆಗೆ ಭರ್ತಿಯಾಗಿವೆ ಎಂದರು. ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ೪೦ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳಿದ್ದು , ಆಲಮಟ್ಟಿ ಜಲಾಶಯದ ಮೇಲೆ ೧೦, ನಾರಾಯಣಪುರ ಜಲಾಶಯದ ಮೇಲೆ  ೮, ಭೀಮಾ ನದಿ ಮೂಲಕ  ೫ ಹಾಗೂ ಕಾಲುವೆ ಮುಖಾಂತರ ೧೭ ಬಹು ಹಳ್ಳಿ ಕುಡಿಯುವ ನೀರಿನ ಯೋಜನೆ (ಎಂವಿಎಸ್) ಗಳು ಅವಲಂಬಿತವಾಗಿರುತ್ತವೆ. ಈ ಯೋಜನೆಗಳಡಿ ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದರು. ಜಿಲ್ಲೆಯ ನಗರ ಪ್ರದೇಶಗಳಿಗೆ ನರಬರಾಜು ಮಾಡುತ್ತಿರುವ ನೀರಿನ ಮೂಲಗಳಲ್ಲಿ ಪ್ರಸ್ತುತ ಸಾಕಷ್ಟು ನೀರು ಲಭ್ಯವಿರುತ್ತದೆ. ಹಾಗಾಗಿ ಎಲ್ಲಿಯೂ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.  ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು, ತಾಲ್ಲೂಕು ಮಟ್ಟದಲ್ಲಿ  ಕಾರ್ಯ ಪಡೆ
(ಟಾಸ್ಕ್ ಫೋರ್ಸ್) ಸಭೆಗಳನ್ನು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಪಂಚಾಯತಿ ವಿಪತ್ತು ನಿರ್ವಹಣಾ ಸಮಿತಿ ಸಭೆಗಳನ್ನು ಜರುಗಿಸಿ ಕುಡಿಯುವ ನೀರಿನ ಯಾವುದೇ ಸಮಸ್ಯೆಯಾಗದಂತೆ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿವರಿಸಿದರು.ಸಾರ್ವಜನಿಕರು ಕುಡಿಯುವ ನೀರಿನ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಮಟ್ಟದಲ್ಲಿ ಸ್ಥಾಪಿತ ಉಚಿತ ಸಹಾಯವಾಣಿ  ಸಂಖ್ಯೆ ೧೦೭೭ ಕ್ಕೆ ಮಾಹಿತಿ ನೀಡಬಹುದಾಗಿದೆ. ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಯಾವುದೇ ನೀರಿನ ಸಮಸ್ಯೆ ಇಲ್ಲ ಎಂದರು.
ಜನಗಣತಿ : ಗಣತಿದಾರರು ಮತ್ತು ಮೇಲ್ವಿಚಾರಕರು ಸರಿಯಾದ ರೀತಿಯಲ್ಲಿ ತರಬೇತಿ ಪಡೆದುಕೊಂಡು ಗಣತಿ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಜೊತೆಗೆ ಸಾರ್ವಜನಿಕರೂ ಜನ ಗಣತಿ ಕಾರ್ಯದ ಯಶಸ್ಸಿಗೆ ಕೈ ಜೋಡಿಸಬೇಕು ಎಂದು  ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ.ಅವರು ಹೇಳಿದರು. ಜನಗಣತಿಯು ದೇಶದ ಜನಸಂಖ್ಯೆಯ ಗಣತಿಯ ಜೊತೆಗೆ, ದೇಶದ ಸಾಮಾಜಿಕ, ಆರ್ಥಿಕ ಸ್ಥಿತಿಗಳು ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ದಾಖಲಿಸುವ ವೈಜ್ಞಾನಿಕ ಪ್ರಕ್ರಿಯೆಯಾಗಿದ್ದು, ಹಾಗಾಗಿ ಜನಗಣತಿ-೨೦೨೭ರ ಮೇಲ್ವಿಚಾರಕರ ಮತ್ತು ಗಣತಿದಾರರಿಗೆ ಹಮ್ಮಿಕೊಳ್ಳಲಾದ ತರಬೇತಿಯನ್ನು  ಸರಿಯಾಗಿ ಪಡೆದುಕೊಂಡು, ಗಣತಿ ಕಾರ್ಯಕ್ಕೆ ತೆರಳಿದಾಗ ಸಾರ್ವಜನಿಕರಿಗೆ ಸೂಕ್ತ ತಿಳಿವಳಿಕೆ ನೀಡಿ, ಗಣತಿ ಕಾರ್ಯಕ್ಕೆ ಒಳಪಡಿಸುವ ಮೂಲಕ ಜನಗಣತಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದ ಅವರು, ಜಿಲ್ಲೆಯ ಜನತೆ ಜನಗಣತಿಯಿಂದ ಹೊರುಗುಳಿಯಬಾದು ಎಂದರು.
ಡಿಜಿಟಲ್‌ಗಣತಿ : ಇದೇ ಮೊದಲ ಬಾರಿಗೆ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ.  ೨ ಹಂತಗಳಲ್ಲಿ ನಡೆಯಲಿರುವ ಗಣತಿ ಕಾರ್ಯವನ್ನು ಸ್ವತಃ ಗಣತಿದಾರರು ವಿಶೇಷ ಕಾಳಜಿ ವಹಿಸುವ ಮೂಲಕ ಯಶಸ್ವಿಗೊಳಿಸಬೇಕು .ಈಗಾಗಲೇ ಸ್ವಯಂ ಗಣತಿ ಕಾರ್ಯ ಆರಂಭವಾಗಿದೆ. ಜನಗಣತಿಯ ಸುರಕ್ಷಿತ ವೆಬ್ ಪೋರ್ಟಲ್: hಣಣಠಿs://se.ಛಿeಟಿsus.gov.iಟಿ ಗೆ ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಬಳಸಿ ಲಾಗಿನ್ ಆಗಿ. ಬಳಿಕ ನಿಮ್ಮ ಸ್ಥಳ ಆಯ್ಕೆ ಮಾಡಿ. ನಕ್ಷೆಯಲ್ಲಿ ನಿಮ್ಮ ಮನೆ ಗುರುತಿಸಿ. ಬಳಿಕ ಮನೆಯ ಇಲ್ಲವೇ ಕುಟುಂಬದ ವಿವರ ಭರ್ತಿ ಮಾಡಿ, ನಿಮ್ಮ Sಇ ಖeಜಿeಡಿeಟಿಛಿe Iಆ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದರು. ನಿಮ್ಮ SಇIಆ ಅನ್ನು ಸುರಕ್ಷಿತವಾಗಿ ಇಟ್ಟು, ಇಟಿumeಡಿಚಿಣoಡಿ ಮನೆಗೆ ಬಂದಾಗ ಅದನ್ನು ಅವರೊಂದಿಗೆ ಹಂಚಿಕೊಳ್ಳಬೇಕು ಎಂದರು. ಏ. ೧೬ ರಿಂದ ಮೇ ೧೫ ರವರೆಗಿನ ಅವಧಿಯಲ್ಲಿ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸಬೇಕು ಎಂದರು. ಒಂದು ವೇಳೆ ಸಾರ್ವಜನಿಕರು
ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೆ, ಅಂತವರ ಸ್ವಯಂ ಗಣತಿಯನ್ನು ಗಣತಿದಾರರೇ ಮಾಹಿತಿ ಸಂಗ್ರಹಿಸಿ ಗಣತಿ ಕಾರ್ಯ ಯಶಸ್ವಿಗೊಳಿಸಲಿದ್ದಾರೆ ಎಂದರು. ಈ ಹಂತದಲ್ಲಿ ಸಾರ್ವಜನಿಕರ ಮಾಹಿತಿಯನ್ನು ಶೇ.೧೦೦ರಷ್ಟು ಗೌಪ್ಯತೆ ಇದ್ದು, ಸ್ವಯಂ ಗಣತಿಯನ್ನು ಪೂರ್ಣಗೊಳಿಸುವಂತೆ  ಗಣತಿದಾರರಿಗೆ ಸೂಚನೆ ನೀಡಲಾಗಿದೆ. ಆಯಾ ಕುಟುಂಬದ ಮುಖ್ಯಸ್ಥರು ತಮ್ಮ ಕುಟುಂಬದ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ, ಅವರಿಗೆ ಒಂದು ವಿಶಿಷ್ಟ ಸ್ವಯಂ-ಗಣತಿ ಐಡಿ (Seಟಜಿ-ಇಟಿumeಡಿಚಿಣioಟಿ Iಆ) ನೀಡಲಾಗುತ್ತದೆ. ಈ ಐಡಿಯನ್ನು ಎಸ್ ಎಂಎಸ್ ಮತ್ತು ಇಮೇಲ್ ಮೂಲಕ ಕಳುಹಿಸಲಾಗುತ್ತದೆ. ಅದನ್ನು ಮನೆಗೆ ಭೇಟಿ ನೀಡುವ ಗಣತಿದಾರರಿಗೆ (ಇಟಿumeಡಿಚಿಣoಡಿ) ಆ ಐಡಿಯನ್ನು ಹಂಚಿಕೊಂಡು ಜನಗಣತಿ ಯಶಸ್ವಿಗೊಳಿಸಬೇಕು ಎಂದರು. ಒಂದು ವೇಳೆ ಸಾರ್ವಜನಿಕರು ತಮ್ಮ ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೆ, ಗಣತಿದಾರರೇ  ಮಾಹಿತಿ ಸಂಗ್ರಹಿಸಬೇಕು ಎಂದರು.
ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಯುತ್ತಿದ್ದು,ಇದು ಸಂಪೂರ್ಣ ಡಿಜಿಟಲ್   ಪ್ರಥಮ ಜನಗಣತಿಯಾಗಿದೆ. ದಿನಾಂಕ: ೦೧-೦೪-೨೦೨೬ ರಿಂದ ೧೫-೪-೨೦೨೬ರವರೆಗೆ ಸ್ವಯಂ ಗಣತಿ ಕಾರ್ಯ ಪ್ರಗತಿಯಲ್ಲಿದೆ. ದಿನಾಂಕ:೧೬-೦೪-೨೦೨೬  ರಿಂದ ೧೬-೦೫-೨೦೨೬ ರವರೆಗೆ ಮನೆ ಪಟ್ಟಿ  ಕ್ಷೇತ್ರ ಕಾರ್ಯ ನಡೆಇದೆ.ಎರಡನೇ ಹಂತದಲ್ಲಿ ಫೆಬ್ರವರಿ ೨೦೨೭ ರಿಂದ ಜನಸಂಖ್ಯಾ ಗಣತಿ ಕಾರ್ಯ ನಡೆಯಲಿದೆ ಎಂದು ಹೇಳಿದರು. ಜನಗಣತಿ ಸಲುವಾಗಿ ಬ್ಲಾಕ್ ರಚಿಸಲಾಗುತ್ತಿದ್ದು, ೧೫೦ ರಿಂದ ೨೦೦ ಮನೆಗಳು ಅಥವಾ ೭೦೦ ರಿಂದ ೮೦೦ ಜನಸಂಖ್ಯೆಗನುಗುಣವಾಗಿ  ಓರ್ವ ಗಣತಿದಾರರನ್ನು ಪ್ರತಿ ೬ ಜನ ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ನೇಮಿಸಲಾಗುವುದು. ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲಿ ೨೮೪೬, ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ೬೨೪ ಹಾಗೂ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ೫೬೫ ಬ್ಲಾಕ್  ಸೇರಿದಂತೆ ಒಟ್ಟಾರೆ ಜಿಲ್ಲೆಯಲ್ಲಿ ೪,೦೩೫ ಬ್ಲಾಕ್ ಗಳ ರಚನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೪೪೦೫ ಗಣತಿದಾರರನ್ನು ಹಾಗೂ  ೭೬೭ ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಹೇಳಿದರು.ಜನಗಣತಿ ಅಧಿಕಾರಿಯು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಸಹಕರಿಸುವಂತೆಯೂ ಹಾಗೂ ಜಿಲ್ಲೆಯಲ್ಲಿ ಭಾರತ ಜನಗಣತಿ ೨೦೨೭ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
WhatsApp Group Join Now
Telegram Group Join Now
Share This Article