ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ ಶಾಸಕ ನಾರಾ ಭರತ್ ರೆಡ್ಡಿ

MK HasiruKranti
ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ ಶಾಸಕ ನಾರಾ ಭರತ್ ರೆಡ್ಡಿ
WhatsApp Group Join Now
Telegram Group Join Now
ಬಳ್ಳಾರಿ, ಏ.10.ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿಯವರು ಗುರುವಾರ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ (ಎಐಸಿಸಿ)ಯ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆಯವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಈ ಸಂದರ್ಭ ಎಐಸಿಸಿ ಅಧ್ಯಕ್ಷರೊಂದಿಗೆ ಔಪಚಾರಿಕ ಮಾತುಕತೆಯ ಜೊತೆಗೆ ಬಳ್ಳಾರಿ ನಗರದ ಅಭಿವೃದ್ಧಿಗೆ ಸಂಬಂಧಿಸಿ ವರದಿ ನೀಡಿದರು. ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಿದರು.
ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಈ ವೇಳೆ ತಮಗೆ ಹಲವು ಸೂಚನೆಗಳನ್ನು ನೀಡಿ, ಮಾರ್ಗದರ್ಶನ ಮಾಡಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article