ಬಾಲ್ಯವಿವಾಹ ಮುಕ್ತ ಗ್ರಾಮವನ್ನಾಗಿ ಮಾಡಿ :ರವಿ ಬಡಿಗೇರ

MK HasiruKranti
ಬಾಲ್ಯವಿವಾಹ ಮುಕ್ತ ಗ್ರಾಮವನ್ನಾಗಿ ಮಾಡಿ :ರವಿ ಬಡಿಗೇರ
WhatsApp Group Join Now
Telegram Group Join Now
 ಕನಕಗಿರಿ : ತಾಲೂಕು ಗೌರಿಪುರ ಗ್ರಾಮದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ  ಗ್ರಾಮ ಪಂಚಾಯತ್ ಗೌರಿಪುರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ *ಮಕ್ಕಳ ಹಕ್ಕುಗಳ ಹಾಗೂ ಮಕ್ಕಳ ಸಂಬಂಧ ಕಾನೂನುಗಳ ಜಾಗೃತಿ ಕಾರ್ಯಕ್ರಮವನ್ನು* ಆಯೋಜಿಸಲಾಗಿತ್ತು.
 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಅಮರೇಶ್ ರಾಠೋಡ್ ರವರು ವಹಿಸಿದ್ದರು,
 ರವಿ ಬಡಿಗೇರ, ರಕ್ಷಣಾಧಿಕಾರಿ ಅಸಾಂಸ್ಥಿಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳರವರು
 ಬಾಲ್ಯ ವಿವಾಹ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ 2012 ತಿದ್ದುಪಡಿ 2019 ಕುರಿತು ಮಾಹಿತಿ ನೀಡುವುದರೊಂದಿಗೆ ಮಕ್ಕಳ ಪ್ರಸ್ತುತ ಸ್ಥಿತಿಗತಿಯ ಕುರಿತು ಸರ್ಕಾರ ಸಮುದಾಯ ಗಳು ತೆಗೆದುಕೊಳ್ಳಬೇಕಾದ ಜವಾಬ್ದಾರಿ ಮತ್ತು ಕ್ರಮಗಳ ಕುರಿತು ಮಾಹಿತಿ ನೀಡಿದರು.
 ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರು  ಪ್ರತಿಭಾ ಕಾಶಿಮಠ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಶ್ರೀ ದೇವರಾಜ್ ತಿಲಗಾರ ಕಾರ್ಯಕ್ರಮದ ಸ್ವಾಗತವನ್ನು ನೆರವೇರಿಸು ನೆರವೇರಿಸಿದರು.
 ಸದರಿ ಕಾರ್ಯಕ್ರಮದಲ್ಲಿ ಮಹಿಳೆಯರು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಊರಿನ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಕಾರ್ಯಕ್ರಮದ ನಿರೂಪಣೆ ಮತ್ತು ವಂದನಾರ್ಪಣೆಯನ್ನು ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಶಿವರಾಜ್ ನೆರವೇರಿಸಿದರು.
WhatsApp Group Join Now
Telegram Group Join Now
Share This Article