ಬಳ್ಳಾರಿ,ಏ.18 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಏ.20 ರಂದು ಸಂಜೆ 07 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಮಹಾಮಾನವತವಾದಿ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 09 ಗಂಟೆಗೆ ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿನ ಶ್ರೀ ಬಸವೇಶ್ವರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡುವರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಸಂಡೂರಿನ ಪ್ರಭುದೇವರ ಸಂಸ್ಥಾನ ಮಹಾಮಠದ ಶ್ರೀ ಪರಮಪೂಜ್ಯ ಶ್ರೀ ನಿಂಜನ ಪ್ರಣವ ಸ್ವರೂಪಿ ಪ್ರಭು ಮಹಾಸ್ವಾಮಿ ಸೇರಿದಂತೆ ಇತರರು ಭಾಗವಹಿಸುವರು.
ಕುರುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ತಿಪ್ಪೇರುದ್ರ ಸಂಡೂರು ಅವರು ಜಯಂತಿ ಕುರಿತು ವಿಶೇಷ ಉಪಪನ್ಯಾಸ ನೀಡುವರು. ಬಳ್ಳಾರಿಯ ರೇಖಾ.ಎಸ್.ವಿ ತಂಡದಿAದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.
*ಮೆರವಣಿಗೆ:*
ಅಂದು ಸಂಜೆ 05 ಗಂಟೆಗೆ ಜಯಂತಿ ಅಂಗವಾಗಿ ಮುನಿಸಿಪಲ್ ಕಾಲೇಜು ಮೈದಾನದಿಂದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೆಯ ಬ್ರೂಸ್‌ಪೇಟೆ ಪೊಲೀಸ್ ಠಾಣೆ ರಸ್ತೆ, ತೇರುಬೀದಿ, ಜೈನ್ ಮಾರ್ಕೆಟ್ ಮೂಲಕ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವೇದಿಕೆ ಕಾರ್ಯಕ್ರಮದ ವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
20 ರಂದು ಮಹಾಮಾನವತವಾದಿ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮ


