ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ ಭೇಟಿ

MK HasiruKranti
ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ ಭೇಟಿ
WhatsApp Group Join Now
Telegram Group Join Now

ಜಮಖಂಡಿ,ಎ,೧೮ : ನಗರದ ಕೇಂದ್ರ ಕಾರಾಗ್ರಹಕ್ಕೆ ಎಡಿಜಿಪಿ ಅಲೋಕ್ ಕುಮಾರ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಎಲ್ಲ ಕಾರಾಗೃಹಗಳ ಭೇಟಿ ಮಾಡುತ್ತಿದ್ದೇನೆ. ಯಾವುದೇ ಲೋಪಗಳಿರದಂತೆ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಜಮಖಂಡಿಯ ಕಾರಾಗೃಹದಲ್ಲಿ ಯಾವುದೇ ಸಮಸ್ಯೆ ಇಲ್ಲ ಇಲ್ಲಿಯ ಅಧಿಕಾರಿಗಳು ಹಾಗೂ ಖೈದಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದೇನೆ ಯಾವುದೇ ಸಮಸ್ಯೆಗಳಿಲ್ಲ. ಇನ್ನೂ ಉತ್ತಮವಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. ಕಾರಾಗೃಹದ ಭದ್ರತಾ ವ್ಯವಸ್ಥೆ, ಸೌಲಭ್ಯಗಳು, ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಲಾಗಿದೆ. ಜೈಲುಗಳಲ್ಲಿ ಶಿಸ್ತಿನಿಂದ ಕರ್ತವ್ಯ ನಿರ್ವಹಿಸಲು ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿದ್ದರು

WhatsApp Group Join Now
Telegram Group Join Now
Share This Article