ಕನ್ನಡ ಚಿತ್ರರಂಗದ ಕುಳ್ಳ ದ್ವಾರಕೀಶ್-ಇನ್ನು ನೆನಪು ಮಾತ್ರ

Ravi Talawar
ಕನ್ನಡ ಚಿತ್ರರಂಗದ ಕುಳ್ಳ ದ್ವಾರಕೀಶ್-ಇನ್ನು ನೆನಪು ಮಾತ್ರ
WhatsApp Group Join Now
Telegram Group Join Now
 ದ್ವಾರಕೀಶ್ ಎಂಬ ಹೆಸರಿನಿಂದ ಗುರುತಿಸಲ್ಪಡುವ ಬಂಗ್ಲೆ ಶಾಮಾರಾವ್ ದ್ವಾರಕಾನಾಥ (19 ಆಗಸ್ಟ್ 1942 -16 ಏಪ್ರಿಲ್ 2024) ಕನ್ನಡ ಚಲನಚಿತ್ರ ನಟ, ನಿರ್ದೇಶಕ ಮತ್ತು ನಿರ್ಮಾಪಕರಾದ ಇವರು ನಮ್ಮನ್ನೆಲ್ಲ ಅಗಲಿದ್ದಾರೆ.
ದ್ವಾರಕೀಶ್ ಆಗಸ್ಟ್ 19 1942 ರಂದು ಹುಣಸೂರು ನಲ್ಲಿ ಶಾಮರಾವ್ ಮತ್ತು ಜಯಮ್ಮರವರಿಗೆ ಜನಿಸಿದರು. ಶಾರದಾ ವಿಲಾಸ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು. ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು.
1963 ರಲ್ಲಿ ಅವರು ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು. ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು.
● ಸಿನಿಜೀವನ:- 1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದರು.
ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು.
● ನಿರ್ದೇಶನ:- 1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್, ಮೊದಲ ಬಾರಿ ನೀ ಬರೆದ ಕಾದಂಬರಿ ಎಂಬ ಚಿತ್ರವನ್ನು ನಿರ್ದೇಶಿಸಿದರು. ಈ ಸಿನಿಮಾ ಸಾಕಷ್ಟು ಯಶಸ್ಸು ಗಳಿಸಿತು. ನಂತರ ಡಾನ್ಸ್ ರಾಜ ಡಾನ್ಸ, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.
● ನಿರ್ಮಾಣ:- 1966ರಲ್ಲಿ ದ್ವಾರಕೀಶ್ ಅವರು ಮಮತೆಯ ಬಂಧನ ಸಿನಿಮಾವನ್ನು ಇನ್ನಿಬ್ಬರು ನಿರ್ಮಾಪಕರ ಜೊತೆ ಸೇರಿ ತುಂಬಾ ಪಿಕ್ಚರ್ಸ್ ಬ್ಯಾನರ್‌ನಲ್ಲಿ ನಿರ್ಮಿಸಿದರು. 1969ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾದರು.
ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದ ಬಳಿಕ ಹಲವು ಸಿನಿಮಾಗಳನ್ನು ನಿರ್ಮಿಸಿ, ಅದರಲ್ಲಿ ಯಶಸ್ಸು ಗಳಿಸಿದರು. ದ್ವಾರಕೀಶ್ ಈವರೆಗೂ 40ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ. ನಿರ್ಮಾಪಕರಾಗಿ ಹಲವು ಕಲಾವಿದರನ್ನು ಚಿತ್ರರಂಗ ಪರಿಚಯಸಿದ್ದಾರೆ.
ಡಾ.ರಾಜ್‌ಕುಮಾರ್ ವಿಷ್ಣುವರ್ಧನ್‌ ಅವರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಗಳಿಸಿರುವ ದ್ವಾರಕೀಶ್ ‘ದ್ವಾರಕೀಶ್ ಚಿತ್ರ’ ನಿರ್ಮಾಣ ಸಂಸ್ಥೆ ಮೂಲಕ ಈಗಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇವರು ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ.
● ನಿಧನ:-  ದ್ವಾರಕೀಶ್ 2024ರ ಏಪ್ರಿಲ್ 16 ರಂದು ತಮ್ಮ 81 ವಯಸ್ಸಿನಲ್ಲಿ ನಿಧನರಾದರು. ಅವರು ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಂತೂ ಆಗಿದೆ ಅಲ್ಲವೇ ಓದುಗರೇ….
ಎನ್.ಎನ್.ಕಬ್ಬೂರ
ಶಿಕ್ಷಕರು & ಬರಹಗಾರರು
ತಾ-ಸವದತ್ತಿ ಜಿ-ಬೆಳಗಾವಿ
ಮೊಬೈಲ್-9740043452
WhatsApp Group Join Now
Telegram Group Join Now
Share This Article