ಬಳ್ಳಾರಿ,ಮೇ 03:ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಅಬಕಾರಿ ಪೊಲೀಸ್ ಅಧಿಕಾರಿಗಳಿಂದ ವಿವಿಧೆಡೆ ದಾಳಿ ನಡೆಸಿ ಮದ್ಯ ವಶಪಡಿಕೊಂಡು 03 ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ ಅವರು ತಿಳಿಸಿದ್ದಾರೆ.
ಕುರುಗೋಡು ತಾಲ್ಲೂಕಿನ ಕೋಳೂರು ಕ್ರಾಸ್‍ನಿಂದ ಸಿರುಗುಪ್ಪ ಕಡೆ ಹೋಗುವ ರಸ್ತೆಯಲ್ಲಿ ರಸ್ತೆಗಾವಲು ವೇಳೆ ದ್ವಿಚಕ್ರ ವಾಹನದಲ್ಲಿ 17.280 ಲೀ. (ಅಂದಾಜು ಮೌಲ್ಯ ರೂ.66962) ಮದ್ಯ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಶಕ್ಕೆ ಪಡೆದು ಪ್ರಕರಣ ದಾಖಲಿಸಿದೆ.
ಸಂಡೂರು ತಾಲ್ಲೂಕಿನ ಬೊಮ್ಮಘಟ್ಟ ಗ್ರಾಮದಿಂದ ಡಿ.ಗೊಲ್ಲರಹಟ್ಟಿ ಗ್ರಾಮಕ್ಕೆ ಹೋಗುವ ರಸ್ತೆಯ ಗೊಲ್ಲರಹಟ್ಟಿ ಕ್ರಾಸ್ ಹತ್ತಿರ ರಸ್ತೆಗಾವಲು ಮಾಡುತ್ತಿರುವ ವೇಳೆ ದ್ವಿಚಕ್ರ ವಾಹನದಲ್ಲಿ 25.920 ಲೀ. (ಅಂದಾಜು ಮೌಲ್ಯ ರೂ.41520) ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ಸಿರುಗುಪ್ಪ ತಾಲ್ಲೂಕಿನ ವೆಂಕಟಾಪುರ ಗ್ರಾಮದಿಂದ ನಾಗರಹಾಳು ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯದ ವೆಂಕಟಾಪುರ ರುದ್ರಭೂಮಿ ಹತ್ತಿರ ರಸ್ತೆಗಾವಲು ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ 51.840 ಲೀ. (ಅಂದಾಜು ಮೌಲ್ಯ ರೂ.63045) ಮದ್ಯ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿ, ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.