ಬೆಂಗಳೂರು, ಮೇ 05: ಅಶ್ಲೀಲ ವಿಡಿಯೋದಲ್ಲಿ ಇದ್ದಾರೆ ಎನ್ನಲಾಗಿರುವ ಸಂತ್ರಸ್ತೆಯನ್ನು ಅಪಹರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ಅಧಿಕಾರಿಗಳು (SIT) ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ನ್ಯಾಯಾಧೀಶರ ನಿವಾಸಕ್ಕೆ ತೆರಳುವ ಮುನ್ನ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಎಸ್ಐಟಿ ಅಧಿಕಾರಿಗಳ ಮುಂದೆ, “ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ” ಎಂದು ಕಣ್ಣೀರಿಟ್ಟಿದ್ದಾರೆ.
ನನಗ್ಯಾಕೆ ಹೀಗೆ ಮಾಡುತ್ತಿದ್ದೀರಾ? ರಾಜಕೀಯ ಪ್ರೇರಿತವಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ನಾನು ಯಾರಿಗೂ ಅನ್ಯಾಯ ಮಾಡಿದವನಲ್ಲ. ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ ಅಂತ ಎಸ್ಐಟಿ ಅಧಿಕಾರಿಗಳ ಎದುರು ಕಣ್ಣೀರಿಟ್ಟಿದ್ದಾರೆ. ಈ ವೇಳೆ ಎಸ್ಐಟಿ ಅಧಿಕಾರಿಗಳು ಹೆಚ್ಡಿ ರೇವಣ್ಣ ಅವರಿಗೆ ನೀರು ಕೊಟ್ಟು ಸಮಾಧಾನಪಡಿಸಿದರು.
ಮಹಿಳೆ ಅಪಹರಣ ಆಗಿದ್ದಾಗ ನಾನು ಬೆಂಗಳೂರಿನಲ್ಲಿದ್ದೆ. ನನ್ನ ತಂದೆ, ಮಾಜಿ ಹೆಚ್ ದೇವೇಗೌಡರನ್ನು ಮಾತನಾಡಿಸಲು ಬಂದು ಕೂತಿದ್ದೆ. ದೇವೇಗೌಡರ ಮನೆಯಲ್ಲಿ ಇದ್ದಾಗಲೇ ನನ್ನನ್ನು ಅರೆಸ್ಟ್ ಮಾಡಿದ್ದಾರೆ ಎಂದು ಹೇಳಿದರು.