ಚಿಕ್ಕೋಡಿ: ಕಳೆದ ಹತ್ತು ವರ್ಷದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಬಡವರಿಗಾಗಿ ಯಾವುದೇ ಯೋಜನೆ ತರುವಲಿ ವಿಫಲವಾಗಿದೆ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಆರೋಪಿಸಿದರು.
ನಾಗರಮುನ್ನೋಳಿಯಲ್ಲಿ ಚಿಕ್ಕೋಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ಗ್ಯಾರಂಟಿ ಯೋಜನೆ ಜಾರಿಗೆ ತರುವ ಮೂಲಕ ಬಡವರ ಪಾಲಿಗೆ ಬೆಳಕಾಗಿದೆ ಎಂದರು.
ಮಹಿಳೆಯರಿಗೆ ಸಂವಿಧಾನದಲ್ಲಿ 50%ರಷ್ಟು ಮೀಸಲಾತಿ ಸಿಗಲು ಕಾರಣೀಕತರು ಯಾರಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ರೈತರ ಸಾಲ ಮನ್ನಾ ಮಾಡಲಾಗುವುದು, ಮಹಿಳೆಯರಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಸಿಗಲಿದೆ ಹಾಗೂ ಇನ್ನು ಬಡವರಿಗಾಗಿ ಸಾಕಷ್ಟು ಯೋಜನೆ ಜಾರಿಗೆ ತರಲಾಗುತ್ತದೆ ಎಂದರು.
ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲು ಕಾಂಗೆಸ್ ಅಭ್ಯರ್ಥಿಗೆ ಮತ ನೀಡಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ರಾಜೇಂದ್ರ ಸಣ್ಣಕಿ,ಬಸವರಾಜ ಬಸವಗುದ್ದಿ, ಅನಂತಕುಮಾರ ಬ್ಯಾಕೂಡ, ಸುನೀತಾ ಐಹೊಳೆ, ಶಿವಪುತ್ರ ಮನಗೂಳಿ, ಪ್ರಶಾಂತ ಐಹೊಳೆ, ಶಿವಾನಂದ ರ‍್ಯಾಯಿ, ಶಂಕರಕಳೆಗುದ್ದಿ, ಗ್ರಾಪಂ ಅಧ್ಯಕ್ಷ ಸಿದಪ್ಪಾ ರ‍್ಯಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.