ಬೆಂಗಳೂರು08: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳ ಸಂಬಂಧ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಎಸ್ಐಟಿ ಮುಂದೆ ದಾಖಲಾಗುವ ಪ್ರಕರಣಗಳನ್ನು ನಡೆಸಲು ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲಾಗಿದೆ. ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಶ್ರೀಮತಿ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.