ರಾಜ್ಯದಲ್ಲಿ ಜೆ.ಡಿ.ಎಸ್ ಬಿಜೆಪಿ ಮೈತ್ರಿ ಮುಂದುವರೆಯುತ್ತೆ: ಬಿ ಎಸ್​ ಯಡಿಯೂರಪ್ಪ

Ravi Talawar
ರಾಜ್ಯದಲ್ಲಿ ಜೆ.ಡಿ.ಎಸ್ ಬಿಜೆಪಿ ಮೈತ್ರಿ ಮುಂದುವರೆಯುತ್ತೆ: ಬಿ ಎಸ್​ ಯಡಿಯೂರಪ್ಪ
WhatsApp Group Join Now
Telegram Group Join Now

ಮೈಸೂರು,11: ರಾಜ್ಯದಲ್ಲಿ ಜೆ.ಡಿ.ಎಸ್ ಬಿಜೆಪಿ ಮೈತ್ರಿ ಮುಂದುವರೆಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಮುಂದುವರಿಯುತ್ತದೆ. ಪರಿಷತ್​ ಚುನಾವಣೆಯಲ್ಲಿ ಜೆಡಿಎಸ್​ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಇಂದು ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದರು.

ನರೇಂದ್ರ ಮೋದಿಯವರು 400 ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ ಇದು ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಚಿಂತನೆ ನಡೆಸಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾ‌ನ ಗೆಲ್ಲುತ್ತೇವೆ. ಕಾಂಗ್ರೆಸ್​ನವರು ಏನೇ ಹೇಳಿದ್ರು ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್​ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಿರಬಹುದು. ಆದ್ರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಕುರಿತು ಮಾತನಾಡಿದ ಅವರು, ಪೆನ್​​ ಡ್ರೈವ್​ ತನಿಖೆ ಪಾರದರ್ಶಕವಾಗಿ ನಡೆಯಬೇಕಿದ್ರೆ ಸಿಬಿಐಗೆ ಕೊಡಬೇಕು. ಬಹುತೇಕ ಜನರ ಅಭಿಪ್ರಾಯ ಇದೇ ಆಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ಇದ್ದು, ಕೆರೆಕಟ್ಟೆಗಳು ಬತ್ತಿಹೋಗಿವೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲಮನ್ನಾ ಮಾಡಿ ರೈತರಿಗೆ ನೆರವಾಗಬೇಕು. ಸಾಲಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.

ಇನ್ನು, ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ಕುರಿತ ಪ್ರಶ್ನೆಗೆ ಉತ್ತರಿಸಲು ಬಿಎಸ್​ವೈ ನಿರಾಕರಿಸಿದರು. ಈಶ್ವರಪ್ಪರ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳುತ್ತಿದ್ದಂತೆ ಈ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ. ಶಿವಮೊಗ್ಗದಲ್ಲಿ ರಾಘವೇಂದ್ರ 2.5 ಲಕ್ಷ ಮತಗಳ ಲೀಡ್​ನಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Share This Article