ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಿಂದ ನಾಮಪತ್ರ ಸಲ್ಲಿಕೆ

Ravi Talawar
ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಿಂದ ನಾಮಪತ್ರ ಸಲ್ಲಿಕೆ
WhatsApp Group Join Now
Telegram Group Join Now

ಪ್ರಧಾನಿ ನರೇಂದ್ರ ಮೋದಿ 2024ರ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಬೆಳಗ್ಗೆ ಕಾಲಭೈರವನ ದರ್ಶನ ಪಡೆದು ಬಳಿಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

2014 ಮತ್ತು 2019ರಲ್ಲಿ ಪ್ರಧಾನಿ ಮೋದಿ ಇಲ್ಲಿಂದ ಗೆದ್ದಿದ್ದಾರೆ. ಇದಕ್ಕೂ ಮುನ್ನ ಮೇ 13ರಂದು ಆ ಪ್ರದೇಶದಲ್ಲಿ ರೋಡ್ ಶೋ ನಡೆಸಿದ್ದರು. ನಟಿ-ರಾಜಕಾರಣಿ ಕಂಗನಾ ರಣಾವತ್ ಕೂಡ ಉತ್ತರಾಖಂಡದ ಮಂಡಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಇದು ಅವರ ಮೊದಲ ರಾಜಕೀಯ ಇನ್ನಿಂಗ್ಸ್ ಎಂದೇ ಹೇಳಬಹುದು.

2014ರ ಲೋಕಸಭೆ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಮೊಟ್ಟಮೊದಲ ಬಾರಿಗೆ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಲು ಬಂದಿದ್ದರು. ಬಿಜೆಪಿ ಭಾರಿ ಬಹುಮತ ಪಡೆದ ನಂತರ ದೇಶದ ಪ್ರಧಾನಿಯಾದರು.

2019ರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಮಂಡಿಸಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾದರು. ನಾಮಪತ್ರ ಸಲ್ಲಿಸುವ ಮುನ್ನ ಪ್ರಧಾನಿ ಮೋದಿ ಸೋಮವಾರ ಸುಮಾರು 4 ಗಂಟೆಗಳ ರೋಡ್ ಶೋ ನಡೆಸಿದರು. ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ತಲುಪಿ ಪ್ರಾರ್ಥನೆ ಸಲ್ಲಿಸಿದರು.

ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಅಮಿತ್ ಶಾ, ಜೆಪಿ ನಡ್ಡಾ ಅವರಲ್ಲದೆ, ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ನಿತೀಶ್ ಕುಮಾರ್ ಅವರು ಪ್ರಧಾನಿ ಮೋದಿಯವರ ನಾಮಪತ್ರದಲ್ಲಿ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು. ಇದಲ್ಲದೇ ಎನ್‌ಡಿಎಯ ಘಟಕ ಪಕ್ಷಗಳ ನಾಯಕರೂ ಪಾಲ್ಗೊಂಡಿದ್ದರು. ಚಿರಾಗ್ ಪಾಸ್ವಾನ್, ಓಂ ಪ್ರಕಾಶ್ ರಾಜ್‌ಭರ್, ಸಂಜಯ್ ನಿಶಾದ್, ಅನುಪ್ರಿಯಾ ಪಟೇಲ್ ಕೂಡ ನಾಮಪತ್ರ ಸಲ್ಲಿಸಲಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಛತ್ತೀಸ್ ಗಢ ಸಿಎಂ ವಿಷ್ಣು ದೇವ್ ಸಾಯಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಹರ್ಯಾಣ ಕೇರಳ ಸಿಎಂ ನಯಾಬ್ ಸಿಂಗ್ ಸೈನಿ, ಗೋವಾ ಸಿಎಂ ಪ್ರಮೋದ್ ಸಾವಂತ್, ಸಿಕ್ಕಿಂ ಸಿಎಂ ಪ್ರೇಮ್ ಸಿಂಗ್ ತಮಾಂಗ್ ಮತ್ತು ತ್ರಿಪುರಾ ಸಿಎಂ ಮಾಣಿಕ್ ಸಹಾ ಕೂಡ ಭಾಗವಹಿಸಬಹುದು.

ಬಿಜೆಪಿಯ ಮಿತ್ರಪಕ್ಷಗಳಾದ ಸುಭಾಷ್ಪ, ನಿಶಾದ್ ಪಾರ್ಟಿ, ಅಪ್ನಾ ದಳ ಎಸ್ ಮತ್ತು ಉತ್ತರ ಪ್ರದೇಶದ ರಾಷ್ಟ್ರೀಯ ಲೋಕದಳದ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

WhatsApp Group Join Now
Telegram Group Join Now
Share This Article