ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪ

Ravi Talawar
ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪ
WhatsApp Group Join Now
Telegram Group Join Now

ಬೆಂಗಳೂರು: ಪ್ರಜ್ವಲ್ ರೇವಣ್ಣ  ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ ಇದೆ. ಇದನ್ನು ಬಿಜೆಪಿ ಮೇಲೆ ಹೊರಿಸುವ ಪ್ರಯತ್ನವನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರೇವಣ್ಣ  ಅವರನ್ನು ಕೂಡಲೇ ಬಂಧಿಸಿದ್ದರೂ, ಚಾಲಕನನ್ನು ಮಾತ್ರ ಬಂಧಿಸಿಲ್ಲ. ಎಸ್‌ಐಟಿ ಅಧಿಕಾರಿಗಳು ಪಕ್ಷಪಾತ ಧೋರಣೆಯಿಂದ ಕೆಲಸ ಮಾಡುತ್ತಿದ್ದಾರೆ. ಹೆಚ್‌ಡಿ ಕುಮಾರಸ್ವಾಮಿ ಅವರು ಹೇಳಿದಂತೆ ಇಲ್ಲಿ ತಿಮಿಂಗಿಲವೇ ಇದೆ. ಅದನ್ನು ಬಡಿದು ತಿನ್ನಬೇಕಾ ಬೇಡವಾ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಕುಟುಂಬ ತೀರ್ಮಾನಿಸಲಿದೆ. ಆದರೆ ಮಾಜಿ ಪ್ರಧಾನಿ ದೇವೇಗೌಡರ ಮೂಲಕ ಇಡೀ ಒಕ್ಕಲಿಗ ಸಮುದಾಯವನ್ನು ಅಪಮಾನಿಸಬೇಕಿತ್ತೇ ಎಂದು ಜನರು ಮಾತನಾಡುತ್ತಿದ್ದಾರೆ. ಆದ್ದರಿಂದ ಬಿಜೆಪಿಯ ಮೇಲೆ ಆರೋಪ ತರುವ ಪ್ರಯತ್ನ ನಡೆದಿದೆ ಎಂದರು.

ತನಿಖೆಯ ಪ್ರತಿ ಮಾಹಿತಿ ಮೊದಲು ಕಾಂಗ್ರೆಸ್ ನಾಯಕರಿಗೆ ತಲುಪುತ್ತಿದೆ. ಎಸ್‌ಐಟಿ ಅಧಿಕಾರಿಗಳು ಕಾಂಗ್ರೆಸ್ ನಾಯಕರು ಹೇಳಿದಂತೆ ಕೇಳುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಆ ನಂತರ ಯಾರೆಲ್ಲಾ ಬಂಧನಕ್ಕೊಳಗಾಗುತ್ತಾರೆ ಎಂದು ನೋಡಲಿ ಎಂದು ಕಿಡಿಕಾರಿದರು.

 

 

 

 

 

WhatsApp Group Join Now
Telegram Group Join Now
Share This Article