ಎಸ್​​ಐಟಿಯನ್ನು ಕಾಣದ ಕೈ ನಿಯಂತ್ರಿಸುತ್ತಿದೆ: ಹೆಚ್ ಡಿ ಕುಮಾರಸ್ವಾಮಿ

Ravi Talawar
ಎಸ್​​ಐಟಿಯನ್ನು ಕಾಣದ ಕೈ ನಿಯಂತ್ರಿಸುತ್ತಿದೆ: ಹೆಚ್ ಡಿ ಕುಮಾರಸ್ವಾಮಿ
WhatsApp Group Join Now
Telegram Group Join Now

ಮೈಸೂರು,16: ತಿಮಿಂಗಲವನ್ನು ಗೃಹ ಸಚಿವ ಪರಮೇಶ್ವರ್ ಪಕ್ಕದಲ್ಲೇ ಕುಳ್ಳಿರಿಸಿಕೊಂಡಿದ್ದಾರೆ. ಆ ತಿಮಿಂಗಲ ಯಾರು ಎನ್ನುವುದು ನನಗಿಂತ ಅವರಿಗೆ ಚೆನ್ನಾಗಿ ಗೊತ್ತಿದೆ. ಆ ತಿಮಿಂಗಲವನ್ನು ಹಿಡಿಯುವುದು ಬಿಟ್ಟು ನನ್ನನ್ನೇ ಕೇಳಿದ್ರೆ ಹೇಗೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಿಮಿಂಗಲ ಯಾರು ಎಂದು ಹೇಳಿದ್ರೆ ತನಿಖೆ ಸುಲಭವಾಗುತ್ತದೆ. ತಿಮಿಂಗಲ ಗೃಹಸಚಿವರ ಪಕ್ಕದಲ್ಲೇ ಕುಳಿತಿರುವಾಗ ಆ ತಿಮಿಂಗಲ ಯಾರು ಎನ್ನುವುದು ಪರಮೇಶ್ವರ್​ಗೆ ಗೊತ್ತು. ಅವರನ್ನು ಬಿಟ್ಟು ನನ್ನನ್ನ ಕೇಳಿದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಎಸ್​​ಐಟಿಯನ್ನು ಕಾಣದ ಕೈ ನಿಯಂತ್ರಿಸುತ್ತಿದೆ. ಕಾಂಗ್ರೆಸ್ ಪಕ್ಷದ ಮಂಡ್ಯದ ಶಾಸಕರೊಬ್ಬರು ಇನ್ನೂ ಒಂದು ವಾರದಲ್ಲಿ ದೊಡ್ಡ ತಿಮಿಂಗಲ ಸಿಗುತ್ತದೆ ಅಂತ ಹೇಳಿದ್ದರು. ಆದರೆ, ಏನಾಯಿತು ಇನ್ನೂ ತನಿಖೆ ಆರಂಭವಾಗಲಿಲ್ಲ ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಅವರು, ಎಸ್​ಐಟಿ ಗೃಹಸಚಿವರಿಗೆ ಸರಿಯಾದ ಮಾಹಿತಿ ಕೊಡುತ್ತಿಲ್ಲ, ಅವರ ಬದಲಾಗಿ ಬೇರೆಯವರಿಗೆ ಮಾಹಿತಿ ನೀಡುತ್ತಿದೆ. ನಾನು ಎಸ್​ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡುತ್ತೇನೆ. ನಿಮ್ಮ ತಂದೆ, ತಾಯಿ, ಸಹೋದರ, ಸಹೋದರಿಯವರ ಮುಖ ನೋಡಿಕೊಂಡು ತನಿಖೆ ಮಾಡಿ, ಆಗಲಾದರೂ ನೊಂದ ಹೆಣ್ಣುಮಕ್ಕಳಿಗೆ ನ್ಯಾಯ ಸಿಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

ಡಿಸಿಎಂ ಡಿ ಕೆ ಶಿವಕುಮಾರ್, ತಿಮಿಂಗಲವನ್ನು ಕುಮಾರಸ್ವಾಮಿ ನುಂಗಿಕೊಳ್ಳಲಿ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಮಯ ಬರಲಿ ತಿಮಿಂಗಲವನ್ನೇ ನುಂಗಿ ಬಿಡೋಣ ಎಂದು ಹೇಳಿದರು.

ಪ್ರಜ್ವಲ್ ಬಗ್ಗೆ ಮಾಹಿತಿ ಇಲ್ಲ: ಪ್ರಜ್ವಲ್ ರೇವಣ್ಣ ಸಂಸದರಾಗಿದ್ದಲೇ ನನ್ನ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ, ಈಗ ನನಗೆ ಸಿಗುತ್ತಾರೆಯೇ ಎಂದ ಅವರು. ಈ ಪ್ರಕರಣ ಆಗುವ ಹಿಂದೆಯೂ ನನ್ನ ಜೊತೆ ಇಲ್ಲ, ಇನ್ನೂ ವಿದೇಶಕ್ಕೆ ಹೋದ ಮೇಲೆ ನನ್ನ ಸಂಪರ್ಕಕ್ಕೆ ಸಿಗಲು ಸಾಧ್ಯವೇ ಎಂದು ಪ್ರಜ್ವಲ್ ರೇವಣ್ಣ ಬಗ್ಗೆ ನನಗೆ ಏನು ಗೊತ್ತಿಲ್ಲ ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article