ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕರಿಗೆ ದೂರು

Ravi Talawar
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕರಿಗೆ ದೂರು
WhatsApp Group Join Now
Telegram Group Join Now

ಬೆಂಗಳೂರು, ಮೇ 18: ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಹುಬ್ಬಳ್ಳಿ ನಗರ ಒಂದು ತಿಂಗಳ ಅವಧಿಯಲ್ಲಿ 2 ಭೀಕರ ಕೊಲೆಗಳಿಗೆ ಸಾಕ್ಷಿಯಾಗಿತ್ತು. ಆಡಳಿತಾರೂಢ ಕಾಂಗ್ರೆಸ್ ನಾಯಕರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ವಿಚಾರವಾಗಿ ಅಸಮಾಧಾನ ವ್ಯಕ್ತವಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ದೂರು ನೀಡಿದೆ

ಮಾಜಿ ಸಿಎಂ ಡಿವಿ ಸದಾನಂದ ಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. ಶಾಸಕ ಸಿಕೆ ರಾಮಮೂರ್ತಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ನಿಯೋಗದಲ್ಲಿದ್ದರು. ರಾಜ್ಯದಲ್ಲಿ ಕಾನೂನು‌ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಡಿಜಿಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗಿದೆ.

ಕರ್ನಾಟಕ ರಾಜ್ಯದ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿರುವುದು ತಮಗೂ ತಿಳಿದಿದೆ. ಹಿಂದೆ ರಾಜ್ಯವು ಕಾನೂನು- ಸುವ್ಯವಸ್ಥೆ ವಿಚಾರದಲ್ಲಿ ಉತ್ತಮ ಹೆಸರು ಪಡೆದಿತ್ತು. ಅಪರಾಧಗಳನ್ನು ಕನಿಷ್ಠ ಪ್ರಮಾಣದಲ್ಲಿ ಇಡುವ ನಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿತ್ತು. ಆದರೆ, ಇದೀಗ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ “ಅಪರಾಧಗಳ ರಾಜ್ಯ” ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ ಎಂದು ಮನವಿ ಪತ್ರದಲ್ಲಿ ಬಿಜೆಪಿ ಉಲ್ಲೇಖಿಸಿದೆ.

ಆರ್ಥಿಕ ಅಪರಾಧಗಳಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ. ಮಕ್ಕಳ ಮೇಲಿನ ಅಪರಾಧಗಳ ಪ್ರಮಾಣ ಶೇ 46ರಷ್ಟು ಹೆಚ್ಚಳ, ಹಿರಿಯ ನಾಗರೀಕರ ಮೇಲಿನ ಅಪರಾಧದಲ್ಲಿ ಶೇಕಡಾ 86ರಷ್ಟು ಹೆಚ್ಚಳ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ ಬಂದಿರುವುದು ಅತ್ಯಂತ ಬೇಸರದ ಮತ್ತು ಆತಂಕದ ವಿಚಾರ. ಕರ್ನಾಟಕ ರಾಜ್ಯದ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ಕಾನೂನು- ಸುವ್ಯವಸ್ಥೆ ಕಡೆ ಗಮನ ಕೊಡುತ್ತಿಲ್ಲ. ಅಪರಾಧ ಪ್ರಮಾಣ ಹೆಚ್ಚಳದ ವಿಚಾರದಲ್ಲೂ ಅದು ಯಾವುದೇ ಕ್ರಮ ಕೈಗೊಂಡಿಲ್ಲ. ಎಂಬುದನ್ನು ತಮ್ಮ ಗಮನಕ್ಕೆ ತರಲು ಬಯಸುತ್ತೇವೆ ಎಂದು ಬಿಜೆಪಿ ನಿಯೋಗ ಉಲ್ಲೇಖಿಸಿದೆ.

WhatsApp Group Join Now
Telegram Group Join Now
Share This Article