ಪ್ರಜ್ವಲ್ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದತಿಗೆ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ!

Ravi Talawar
ಪ್ರಜ್ವಲ್ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದತಿಗೆ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ!
WhatsApp Group Join Now
Telegram Group Join Now

ಬೆಂಗಳೂರು, ಮೇ 21: ಸಂಸದ ಪ್ರಜ್ವಲ್ ರೇವಣ್ಣ  ಅವರ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದು ಮಾಡುವಂತೆ ಕೇಂದ್ರ ಸರ್ಕಾರಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಪತ್ರ ಬರೆದಿದ್ದಾರೆ ಎಂದು ಗೃಹ ಸಚಿವ ಡಾ.ಪರಮೇಶ್ವರ್  ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಈಗಾಗಲೆ ವಾರಂಟ್ ಜಾರಿ ಆಗಿದೆ. ಅದರ ಆಧಾರದ ಮೇಲೆ ಪಾಸ್​ಪೋರ್ಟ್ ರದ್ದು ಕೋರಿ ಪತ್ರ ಬರೆಯಲಾಗಿದೆ. ಪಾಸ್​ಪೋರ್ಟ್​ ರದ್ದು ಮಾಡಿದರೆ ಪ್ರಜ್ವಲ್ ಭಾರತಕ್ಕೆ ಬರಬೇಕಾಗುತ್ತದೆ ಎಂದರು.

ಶರಣಾಗುವಂತೆ ಪ್ರಜ್ವಲ್​ ರೇವಣ್ಣ ಅವರಿಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಮನವಿ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಇದು ಅವರ ಕುಟುಂಬದ ಆಂತರಿಕ ವಿಚಾರ. ಇನ್ನು ಫೋನ್​ ಟ್ಯಾಪ್​ ಆಗುತ್ತಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ವತಿಯಿಂದ ‌ಯಾರ ಫೋನ್ ಸಹ ಟ್ಯಾಪ್ ಮಾಡಿಲ್ಲ. ಒಂದು ವೇಳೆ ಫೋನ್​ ಟ್ಯಾಪ್​ ಆಗಿದ್ದರೆ ದಾಖಲೆ ಕೊಡಲಿ. ತನಿಖೆ ಮಾಡುತ್ತೇವೆ ಎಂದರು.

ವಕೀಲ ದೇವರಾಜೇಗೌಡ ಆಡಿಯೋ ಬಗ್ಗೆ ಎಸ್​ಐಟಿ ನೋಡಿಕೊಳ್ಳುತ್ತೆ. ಪ್ರತಿಯೊಂದು ಹಂತದಲ್ಲಿ ತನಿಖೆ ಮಾಡಲು ನಾವು ಹೇಳಲ್ಲ. ತನಿಖೆ ಮಾಡಲು ಎಸ್​ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ಹೇಳಿದರು. ಹೆಚ್​.ಡಿ ದೇವೇಗೌಡರ ಕುಟುಂಬ ಮುಗಿಸಲು ಷಡ್ಯಂತ್ರ್ಯ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೆಚ್​ಡಿ ಕುಮಾರಸ್ವಾಮಿ ಅವರು ಯಾವ ಉದ್ದೇಶದಿಂದ‌ ಹೇಳಿದ್ದಾರೆ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಬಹಳ‌ ಕೆಲಸ ಇದೆ, ಆಡಳಿತ ಮಾಡಬೇಕು. ಇಡೀ ದೇಶ ನಮ್ಮ ಕಾಂಗ್ರೆಸ್ ಸರ್ಕಾರದ ಕಡೆ ನೋಡುತ್ತಿದೆ ಎಂದರು.

ಬೆಂಗಳೂರಿನ ಜಿ.ಆರ್.ಫಾರ್ಮ್​ಹೌಸ್​ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ದಾಳಿ ವೇಳೆ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಪತ್ತೆ ಆಗಿದೆ. ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ಮಾಹಿತಿ ಪಡೆದಿದ್ದಾರೆ. ಡ್ರಗ್ಸ್ ಫ್ರೀ ರಾಜ್ಯ ಮಾಡಬೇಕು ಅಂತ ಕ್ರಮ ಕೈಗೊಳ್ಳುತ್ತಿದ್ದೇವೆ. ಗಾಂಜಾ ಎಲ್ಲಿಂದ ಬರುತ್ತೆ ಅಂತ ಮಾಹಿತಿ ಮೇಲೆ ಆರೋಪಿಗಳನ್ನು ಹಿಡಿಯುತ್ತೇವೆ. ಪೆಡ್ಲರ್ಸ್ ಯಾರಿದ್ದಾರೆ ಅವರನ್ನು ಹಿಡಿಯವುದು ಬಹಳ ಮುಖ್ಯ. ರೇವ್ ಪಾರ್ಟಿ ಹತ್ತಿಕ್ಕುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

WhatsApp Group Join Now
Telegram Group Join Now
Share This Article