ರೇವ್​ ಪಾರ್ಟಿ ಮೇಲೆ ಪೊಲೀಸರ ದಾಳಿ ವೇಳೆ ಡ್ರಗ್ಸ್, ಗಾಂಜಾ ಪತ್ತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Ravi Talawar
ರೇವ್​ ಪಾರ್ಟಿ ಮೇಲೆ ಪೊಲೀಸರ ದಾಳಿ ವೇಳೆ ಡ್ರಗ್ಸ್, ಗಾಂಜಾ ಪತ್ತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
WhatsApp Group Join Now
Telegram Group Join Now

ಬೆಂಗಳೂರು: ನಗರದ ಹೆಬ್ಬಗೋಡಿ ರೇವ್​ ಪಾರ್ಟಿ ಮೇಲೆ ಪೊಲೀಸರ ದಾಳಿ ವೇಳೆ ಡ್ರಗ್ಸ್, ಗಾಂಜಾ ಪತ್ತೆಯಾಗಿದೆ. ನಾವು ಈಗಾಗಲೇ ಮಾದಕವಸ್ತು ಮುಕ್ತ ರಾಜ್ಯಕ್ಕಾಗಿ ಕ್ರಮ ಕೈಕೊಳ್ಳುತ್ತಿದ್ದೇವೆ. ರೇವ್ ಪಾರ್ಟಿ, ಡ್ರಗ್ಸ್​ ​ಅನ್ನು ಸಂಪೂರ್ಣವಾಗಿ ಹತ್ತಿಕ್ಕುವ ಕೆಲಸ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ರೇವ್​ ಪಾರ್ಟಿಯಲ್ಲಿ ಯಾವೆಲ್ಲ ವ್ಯಕ್ತಿಗಳು ಭಾಗಿಯಾಗಿದ್ದರು ಎಂದು ಪೊಲೀಸರು ಮಾಹಿತಿ ತೆಗೆದುಕೊಂಡಿದ್ದಾರೆ. ಪೊಲೀಸ್​ ದಾಳಿ ವೇಳೆ ಡ್ರಗ್ಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಸಿಕ್ಕಿದೆ. ಇಲ್ಲಿಯವರು ಪಾರ್ಟಿ ಏರ್ಪಡಿಸಿದ್ದು, ಹೊರಗಡೆಯವರು ಭಾಗವಹಿಸಿದ್ದರು. ಈ ಬಗ್ಗೆ ಪೊಲೀಸರು ತನಿಖೆ ಮಾಡಿ, ಕಾನೂನು ಕ್ರಮಕೈಗೊಳ್ಳುತ್ತಾರೆ. ಇಂತಹದ್ದನ್ನು ಸರ್ಕಾರ ಹತ್ತಿಕ್ಕುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಈಗಾಗಲೇ ನಾವು ಡ್ರಗ್ಸ್ ಕಡಿವಾಣಕ್ಕೆ ಶಪಥ ಮಾಡಿದ್ದೇವೆ. ರಾಜ್ಯ ಸರ್ಕಾರವು ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಬೇಕೆಂದು ನಿರ್ಧಾರ ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ, ನಾನು ಹೇಳಿಕೆಯನ್ನೂ ನೀಡಿದ್ದೇವೆ. ಈ ಕುರಿತು ಅಧಿಕಾರಿಗಳಿಗೂ ಸೂಚನೆ ಕೊಟ್ಟದ್ದೇವೆ. ಇದುವರೆಗೆ ಸಾವಿರಾರು ಕೋಟಿ ಡ್ರಗ್ಸ್ ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದೇವೆ ಎಂದರು.

WhatsApp Group Join Now
Telegram Group Join Now
Share This Article