ದೆಹಲಿ,23: ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ನಡೆಸಿದ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಪೋಷಕರ ಹೇಳಿಕೆ ಪಡೆಯಲು ದೆಹಲಿ ಪೊಲೀಸರು ಮುಂದಾಗಿದ್ದು ಆದರೆ ಇಂದು ಪಡೆಯುವುದಿಲ್ಲ ಎಂದು ಹೇಳಿದ್ದಾರೆ.
ಸ್ವಾತಿ ಮಲಿವಾಲ್ಗೆ ಕಪಾಳ ಮೋಕ್ಷ ಮಾಡಿ, ಹೊಟ್ಟೆಗೆ ಒದ್ದಿದ್ದರು ಎಂದು ಚಾರ್ಜ್ಶೀಟ್ನಲ್ಲಿ ಬರೆಯಲಾಗಿದೆ. ಆದರೆ ಇಂದು ಪೊಲೀಸರು ಅರವಿಂದ್ ಕೇಜ್ರಿವಾಲ್ ಅವರ ಪೋಷಕರ ಹೇಳಿಕೆ ಪಡೆಯಲು ಬರುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಸಂಸದೆ ಸ್ವಾತಿ ಮಲಿವಾಲ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣದಲ್ಲಿ ಕೇಜ್ರಿವಾಲ್ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಆಶಿಸುವುದಾಗಿ ತಿಳಿಸಿದ್ದರು.