ಜಮೀರ್ ಅಹಮದ್ ಖಾನ್ ಶಾಸಕ ಸ್ಥಾನ ವಜಾ ಅರ್ಜಿ ತಿರಸ್ಕಾರ: ಜಮೀರ್ ನಿರಾಳ

Ravi Talawar
ಜಮೀರ್ ಅಹಮದ್ ಖಾನ್ ಶಾಸಕ ಸ್ಥಾನ ವಜಾ ಅರ್ಜಿ ತಿರಸ್ಕಾರ: ಜಮೀರ್ ನಿರಾಳ
WhatsApp Group Join Now
Telegram Group Join Now

ನವದೆಹಲಿ, ಮೇ 27: ಜಮೀರ್ ಅಹಮದ್ ಖಾನ್  ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್  ವಜಾ ಮಾಡಿದೆ.

ಉಚಿತ ಗ್ಯಾರಂಟಿಗಳ ಆಮಿಷವೊಡ್ಡುವ ಮೂಲಕ ಜಮೀರ್ ಅಹಮ್ಮದ್ ಖಾನ್ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ. ಹೀಗಾಗಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಚಾಮರಾಜಪೇಟೆ ನಿವಾಸಿ ಶಶಾಂಕ್ ಜೆ. ಶ್ರೀಧರ್ ಎಂಬುವರ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​​ನ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠ, ಚುನಾವಣಾ ಗ್ಯಾರಂಟಿಗಳು ಭ್ರಷ್ಟಾಚಾರಕ್ಕೆ‌ ಕಾರಣವಾಗುವುದಿಲ್ಲ. ಸಾರ್ವಜನಿಕರಿಗೆ ನೇರವಾಗಿ ಆರ್ಥಿಕ ಸಹಾಯಕವಾಗುತ್ತದೆ. ಇದರಿಂದ ಅಭ್ಯರ್ಥಿ ಭ್ರಷ್ಟನಾಗುತ್ತಾನೆ ಎಂಬ ವಾದ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ರಾಜಕೀಯ ಪಕ್ಷದ ಪ್ರಣಾಳಿಕೆಯಲ್ಲಿನ ಭರವಸೆಗಳು ಜನರಿಗೆ ಸಹಾಯಕವಾಗುತ್ತವೆ. ಸಾರ್ವಜನಿಕರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಆರ್ಥಿಕ ಸಹಾಯಕ್ಕೆ ಕಾರಣವಾಗುತ್ತವೆ. ಇದರಿಂದ ಆ ಪಕ್ಷದ ಅಭ್ಯರ್ಥಿಯ ಭ್ರಷ್ಟಚಾರಕ್ಕೆ ಕಾರಣವಾಗುತ್ತದೆ ಎಂಬುದು ಸೂಕ್ತವಾದ ವಾದವಲ್ಲ. ಅದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

 

WhatsApp Group Join Now
Telegram Group Join Now
Share This Article