ಮೇ 30ರಂದು ‘ಹಾಸನ ಚಲೋ’ ಆಂದೋಲನ

Ravi Talawar
ಮೇ 30ರಂದು ‘ಹಾಸನ ಚಲೋ’ ಆಂದೋಲನ
WhatsApp Group Join Now
Telegram Group Join Now

ಬೆಂಗಳೂರು: ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಮೇ 30ರಂದು ಹಮ್ಮಿಕೊಂಡಿರುವ ‘ಹಾಸನದೆಡೆಗೆ ನಮ್ಮ ನಡಿಗೆ’ ಹಾಸನ ಚಲೋ ಆಂದೋಲನಕ್ಕೆ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ ಬೆಂಬಲ ಸೂಚಿಸಿದೆ.

ಈ ಕುರಿತು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ವಿವರಣೆ ನೀಡಿದ ಸಂಘಟನೆಯ ಪದಾಧಿಕಾರಿಗಳು, “ನಾವೆದ್ದು ನಿಲ್ಲದಿದ್ದರೆ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಕಾಳಜಿಯುಳ್ಳ ಎಲ್ಲ ಸಂಘಟನೆಗಳ, ವ್ಯಕ್ತಿಗಳ ಜಂಟಿವೇದಿಕೆಯಾಗಿದೆ. ಮೇ 30ರಂದು ‘ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಹಮ್ಮಿಕೊಂಡಿರುವ ‘ಹಾಸನದೆಡೆಗೆ ನಮ್ಮ ನಡಿಗೆ’ ಹಾಸನ ಚಲೋ ಕಾರ್ಯಕ್ರಮವನ್ನು ಬೆಂಬಲಿಸುವುದಾಗಿ ತಿಳಿಸಿದೆ.

ಬೃಹತ್ ಸಾರ್ವಜನಿಕ ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲ ಭಾಗಗಳಿಂದ ಮಹಿಳಾ, ದಲಿತ, ಕಾರ್ಮಿಕ, ರೈತ, ವಿದ್ಯಾರ್ಥಿ, ಯುವಜನರ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಲಿಂಗತ್ವ ಅಲ್ಪಸಂಖ್ಯಾತರ, ಆದಿವಾಸಿಗಳ ಮತ್ತು ಇನ್ನಿತರ ಹಲವು ಸಂಘಟನೆಗಳ ಪ್ರತಿನಿಧಿಗಳು, ಹಾಗೆಯೇ ರಾಜ್ಯದ ಮತ್ತು ದೇಶದ ಕೆಲವೆಡೆಗಳಿಂದ ಚಿಂತಕರು, ಬರಹಗಾರರು, ಬುದ್ಧಿಜೀವಿಗಳು, ಕಲಾವಿದರು, ನಿವೃತ್ತ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಮುಂತಾದ ಸುಮಾರು 10,000ದಷ್ಟು ಮಂದಿ ಭಾಗವಹಿಸಲಿದ್ದಾರೆ.

ಈ ಪ್ರತಿಭಟನೆಯ ಉದ್ದೇಶವು, ಪ್ರಜ್ವಲ್ ರೇವಣ್ಣನ ಕ್ರಿಮಿನಲ್ ಲೈಂಗಿಕ ಹಿಂಸಾಚಾರದ ಬಲಿಪಶುಗಳಾದ ಸಾವಿರಾರು ಮಹಿಳೆಯರಿಗೆ ಸ್ಥೆರ್ಯ ತುಂಬಿ ಬಹಿರಂಗವಾಗಿ ಮತ್ತು ಒಗ್ಗಟ್ಟಾಗಿ ಅವರ ಘನತೆಯನ್ನು ಎತ್ತಿಹಿಡಿಯುವುದರ ಜೊತೆಗೆ ಈ ಕೆಳಗಿನ ವಿಷಯಗಳಿಗಾಗಿ ಒತ್ತಾಯಿಸುವುದೂ ಕೂಡಾ ಆಗಿದೆ.

WhatsApp Group Join Now
Telegram Group Join Now
Share This Article