ಬೆಂಗಳೂರು, ಮೇ 31: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಈ ಹಿನ್ನೆಲಯಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ಸೂಚಿಸಿದ್ದಾರೆ.
ಹಗರಣ ಸಂಬಂಧ ಗುರುವಾರ (ಮೇ 30) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿದ್ದರು. ಸಭೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಸರ್ಕಾರಕ್ಕೆ ಮುಖಭಂಗವಾಬಾರದು ಹೀಗಾಗಿ ಬಿ.ನಾಗೇಂದ್ರ ರಾಜಿನಾಮೆ ನೀಡುವುದು ಒಳಿತು. ತನಿಖೆ ಪೂರ್ಣವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತೀರ್ಮಾನ ಕೈಗೊಂಡರು. ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ, ಖುದ್ದು ತಾವೇ ಹೇಳಿಕೆ ನೀಡಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.
ಬಿ. ನಾಗೇಂದ್ರ ಅವರು ರಾಜಿನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ಈ ಹಿನ್ನೆಲೆ ಸರ್ಕಾರದ ಮೇಲೆ ಒತ್ತಡ ಸೃಷ್ಠಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.