ಬೆಂಗಳೂರು: ಭಾಗ್ಯಗಳ ಸರ್ಕಾರ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್ ಆಡಳಿತದಲ್ಲಿ ಅಮಾಯಕ ಹೆಣ್ಣುಮಕ್ಕಳಿಗೆ ಕೊಲೆ ಭಾಗ್ಯ, ಪ್ರಮಾಣಿಕ ಅಧಿಕಾರಿಗಳಿಗೆ ವರ್ಗಾವಣೆ ಭಾಗ್ಯ, ಅಸಹಾಯಕ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಕೆಆರ್ಐಡಿಎಲ್ ನಿಂದ ಬಿಲ್ ಪಾವತಿಯಾಗದೇ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್.ಗೌಡರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಕರಣ ಸಂಬಂಧ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ಭ್ರಷ್ಟ ವ್ಯೂಹಕ್ಕೆ ಸಿಲುಕಿದ ಅಧಿಕಾರಿಯೊಬ್ಬರ ಆತ್ಮಹತ್ಯೆಯ ಕರಿನೆರಳು ಅಚ್ಚೊತ್ತಿರುವ ಬೆನ್ನಲೇ ಕೆಆರ್ಐಡಿಎಲ್ ನಿಂದ ಬಿಲ್ ಪಾವತಿಯಾಗದೇ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್.ಗೌಡರ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ, ಈ ಸರ್ಕಾರದಲ್ಲಿ ಏನಾಗುತ್ತಿದೆ ಎಂಬ ಆತಂಕ ಜನರಲ್ಲಿ ಮೂಡುತ್ತಿದೆ ಎಂದು ಹೇಳಿದ್ದಾರೆ.
ಭಾಗ್ಯಗಳ ಸರ್ಕಾರ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್ ಆಡಳಿತದಲ್ಲಿ ಅಮಾಯಕ ಹೆಣ್ಣುಮಕ್ಕಳಿಗೆ ಕೊಲೆ ಭಾಗ್ಯ, ಪ್ರಮಾಣಿಕ ಅಧಿಕಾರಿಗಳಿಗೆ ವರ್ಗಾವಣೆ ಭಾಗ್ಯ, ಅಸಹಾಯಕ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಲಾಗುತ್ತಿದೆ ಬರಿದಾಗಿರುವ ಸರ್ಕಾರಿ ಖಜಾನೆ ಗುತ್ತಿಗೆದಾರರ ಪಾಲಿಗೆ ಆತ್ಮಹತ್ಯೆಯ ಬಾವಿಯಾಗುತ್ತಿದೆ. ಈ ಸರ್ಕಾರಕ್ಕೆ ಮಾನವ ಜೀವಗಳೆಂದರೆ ಅದು ಕೇವಲದ ಸಂಕೇತವಾಗಿದೆ.