ಎಕ್ಸಿಟ್ ಪೋಲ್​ಗಿಂತ ಬಿಜೆಪಿಗೆ ಉತ್ತಮ ಫಲಿತಾಂಶ: ಸಚಿವ ಜೋಶಿ

Ravi Talawar
ಎಕ್ಸಿಟ್ ಪೋಲ್​ಗಿಂತ ಬಿಜೆಪಿಗೆ ಉತ್ತಮ ಫಲಿತಾಂಶ: ಸಚಿವ ಜೋಶಿ
WhatsApp Group Join Now
Telegram Group Join Now

ಬೆಳಗಾವಿ, ಜೂನ್​ 02: ಎಕ್ಸಿಟ್ ಪೋಲ್​ಗಿಂತ ಬಿಜೆಪಿಗೆ ಉತ್ತಮ ಫಲಿತಾಂಶ ಬರಲಿದೆ. ದೇಶದಲ್ಲಿ ಬಿಜೆಪಿ ಪ್ರಚಂಡ ವಿಜಯ ಸಾಧಿಸಲಿದೆ ಎಂದು ಕೇಂದ್ರ ಸಚಿವ, ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ  ಸಮೀಕ್ಷೆಯಲ್ಲಿ ಬಿಜೆಪಿ ಬಹುಮತ ವಿಚಾರವಾಗಿ ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್ ಸರಾಸರಿ ತೆಗೆದ್ರೂ 350-370 ಸ್ಥಾನ ಬರಲಿದೆ. ಅಭಿವೃದ್ಧಿ ಹೊಂದಿದ ಭಾರತ ಮಾಡಲು ಅನುಕೂಲ ಆಗಲಿದೆ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಪಕ್ಷದಿಂದ ಕುಟುಂಬಸ್ಥರಿಗೆ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸಾಮಾನ್ಯವಾಗಿ ಫ್ಯಾಮಿಲಿ ರನ್ ಪಾರ್ಟಿ. ತಂದೆಯ ಕಾರಣಕ್ಕೆ ಬಿಜೆಪಿಯಲ್ಲಿ ಯಾರಿಗೂ ಹುದ್ದೆ ಸಿಗಲಿಲ್ಲ. ಬಿಜೆಪಿಯಲ್ಲಿ ಕೆಲಸ ಮಾಡಿದರೆ ಸ್ವತಃ ಬಲದ ಮೇಲೆ ಬರಬಹುದು. ಆದರೆ ಕಾಂಗ್ರೆಸ್, ಸಮಾಜವಾದಿ, ಆರ್​ಜೆಡಿಯಲ್ಲಿ ಹಾಗೆ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

 

WhatsApp Group Join Now
Telegram Group Join Now
Share This Article