ಬೆಂಗಳೂರು,ಜೂ.02:ಇಂದಿನಿಂದ ಬೆಂಗಳೂರು, ಹಾಸನ, ಕೊಡಗು, ರಾಮನಗರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ
ಜೂನ್ 3ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರು, ಹಾಸನ, ಶಿರಹಟ್ಟಿಯಲ್ಲಿ ಹೆಚ್ಚು ಮಳೆಯಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು ಸಂಜೆ ವೇಳೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.
ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಕಲಬುರಗಿಯಲ್ಲಿ 42.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.