ಮತ ಎಣಿಕೆಗೆ ಅಡ್ಡಿ ಸಾಧ್ಯತೆ:ಚುನಾವಣಾ ಆಯೋಗಕ್ಕೆ ಡಾ. ಸಿಎನ್ ಮಂಜುನಾಥ್ ಪತ್ರ

Ravi Talawar
ಮತ ಎಣಿಕೆಗೆ ಅಡ್ಡಿ ಸಾಧ್ಯತೆ:ಚುನಾವಣಾ ಆಯೋಗಕ್ಕೆ ಡಾ. ಸಿಎನ್ ಮಂಜುನಾಥ್ ಪತ್ರ
WhatsApp Group Join Now
Telegram Group Join Now

ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲು ದಿನಗಣನೆ ಆರಂಭವಾಗಿದ್ದು, ಬಿಜೆಪಿ-ಜೆಡಿಎಸ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತ ಎಣಿಕೆ ಕಾರ್ಯಕ್ಕೆ ಉಂಟಾಗುವ ಸಂಭಾವ್ಯ ಅಡೆತಡೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಅಳಿಯ ಡಾ. ಸಿಎನ್ ಮಂಜುನಾಥ್ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ, ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿದಿದ್ದಾರೆ.

ಶಾಂತಿಯುತ ಮತ್ತು ಪಾರದರ್ಶಕ ಮತ ಎಣಿಕೆ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕಾಂಗ್ರೆಸ್ ಅಭ್ಯರ್ಥಿ ಚುನಾವಣೆಯಲ್ಲಿ ಸೋಲನುಭವಿಸಿದರೆ, ಗಮನಾರ್ಹ ಹಿಂಸಾಚಾರ ಮತ್ತು ಮತ ಎಣಿಕೆ ಪ್ರಕ್ರಿಯೆಗೆ ಅಡ್ಡಿಪಡಿಸುವ ಪ್ರಯತ್ನಗಳು ನಡೆಯಬಹುದು ಎಂಬ ವಿಶ್ವಾಸಾರ್ಹ ಮಾಹಿತಿಯಿದೆ ಎಂದು ಆಯೋಗಕ್ಕೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

WhatsApp Group Join Now
Telegram Group Join Now
Share This Article