ಬೆಂಗಳೂರು ಗ್ರಾಮಾಂತರ, ಜೂ.06: ಉತ್ತರಾಖಂಡ್ಗೆ ಚಾರಣಕ್ಕೆಂದು ರಾಜ್ಯದ 21 ಜನರು ತೆರಳಿದ್ದರು. ಈ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ಚಾರಣಿಗರು ಉತ್ತರಾಖಂಡದ ಸಹಸ್ತ್ರತಲ್ನಲ್ಲಿ ಅಪಾಯಕ್ಕೆ ಸಿಲುಕಿದ್ದು, ಆ ಪೈಕಿ 9 ಮಂದಿ ಮೃತಪಟ್ಟಿದ್ದರು.
ಬಳಿಕ ಬದುಕುಳಿದವರ ರಕ್ಷಣೆಗಾಗಿ ತುರ್ತು ಕಾರ್ಯಾಚರಣೆ ನಡೆಸಿ, ಮೃತಪಟ್ಟ ಕನ್ನಡಿಗರ ಶವಗಳನ್ನು ಬೆಂಗಳೂರಿಗೆ ತರುವ ಬಗ್ಗೆ ಉತ್ತರಾಖಂಡ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಕಾರ್ಯದರ್ಶಿ ಜೊತೆ ರಾಜ್ಯದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಾತುಕತೆ ನಡೆಸಿ, ಇದೀಗ ಕೃಷ್ಣಬೈರೇಗೌಡ ಅವರು ಡೆಹ್ರಾಡೂನ್ನಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದಿದ್ದಾರೆ.
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಚಿವ ಕೃಷ್ಣಬೈರೆಗೌಡ ಜೊತೆ ಇಂಡಿಗೋ ವಿಮಾನದಲ್ಲಿ 13 ಜನ ಕನ್ನಡಿಗರು ಆಗಮಿಸಿದ್ದಾರೆ. ಏರ್ಪೋರ್ಟ್ನಲ್ಲಿ ಸ್ವಾಗತಕೋರಲು ಕುಟುಂಬಸ್ಥರು ಸಹ ಆಗಮಿಸಿದ್ದಾರೆ.