ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಆರಂಭವಾಗಿದೆ, ಕಳೆದ ಎರಡು ತಿಂಗಳಿನಿಂದ ಇದ್ದ ಬಿಸಿಲಿನ ಅಬ್ಬರ ಇಳಿದಿದೆ. ಬೆಂಗಳೂರಿನಲ್ಲಿ ಗುರುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಬೆಳಗ್ಗೆ ಕೂಡ ಜಿಟಿ ಜಿಟಿ ಮಳೆ ಇದೆ. ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವೆಡೆ ಇಂದು ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಲಬುರಗಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಮಾಗಡಿ, ಮಂಠಾಳ, ರಾಯಲ್ಪಾಡು, ಮಧುಗಿರಿ, ಅಜ್ಜಂಪುರ, ಮಾಣಿ, ಮಂಕಿ, ಚನ್ನರಾಯಪಟ್ಟಣ, ಅಂಕೋಲಾ, ಶಾಹಪುರ, ಬಾಳೆಹೊನ್ನೂರು, ಶ್ರವಣಬೆಳಗೊಳ, ತುಮಕೂರು, ತೊಂಡೇಭಾವಿ, ಕಾರವಾರ, ಶಿವಮೊಗ್ಗ, ಬನವಾಸಿ, ಕೋಟ, ಕುಂದಾಪುರ, ಮುಲ್ಕಿ, ಖಜೂರಿ, ಅಥಣಿ, ಬಾದಾಮಿ, ಧಾರವಾಡ, ಮಹಾಲಿಂಗಪುರ, ಬೀದರ್, ಬಾದಾಮಿ, ಧಾರವಾಡ, ಬಿಳಗಿ, ಹಾವೇರಿ, ಕೂಡಲಸಂಗಮ, ಬೇಲೂರು, ದಾವಣಗೆರೆ, ಗುಬ್ಬಿ, ದೊಡ್ಡಬಳ್ಳಾಪುರ, ಹೆಸರಘಟ್ಟದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ಎಚ್ಎಎಲ್ನಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.