ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

Ravi Talawar
ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು
WhatsApp Group Join Now
Telegram Group Join Now

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಲ್ಲದೆ ಇಂದು ಮಧ್ಯಾಹ್ನ 1 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾ.ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ಪೀಠ ಸೂಚನೆ ನೀಡಿದೆ.

ಇನ್ನು ಜಾಮೀನು ನೀಡಿರುವ ಹೈಕೋರ್ಟ್ ಏಕಸದಸ್ಯ ಪೀಠ ಭವಾನಿ ಅವರನ್ನು ಇಂದು ಮಧ್ಯಾಹ್ನ1 ಗಂಟೆಗೆ ಆರಂಭವಾಗಲಿರುವ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ. ಅಲ್ಲದೆ ಎಸ್ ಐಟಿ ಅಧಿಕಾರಿಗಳ ತನಿಖೆಗೆ ಸಹಕರಿಸಬೇಕು. ಕೆಆರ್ ನಗರ ಪ್ರವೇಶ ಮಾಡಬಾರದು ಎಂದು ಸೂಚನೆ ನೀಡಿದೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ  ಪ್ರಕರಣದಲ್ಲಿ ಭವಾನಿ ರೇವಣ್ಣ  ಅವರಿಗೆ ಹೈಕೋರ್ಟ್  ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಇದೇ ವೇಳೆ ಈ ಆದೇಶವು ಜಾಮೀನಿಗಾಗಿ ಮಾತ್ರವೇ ಹೊರತು ಭವಾನಿ ಈ ಆದೇಶವನ್ನು ಸಂಭ್ರಮಿಸುವಂತಿಲ್ಲ. ಆರೋಪಿ ಭವಾನಿ ರೇವಣ್ಣ ತಪ್ಪದೇ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಮತ್ತು ತನಿಖೆಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ನ್ಯಾಯಾಲಯವು ಕಠಿಣ ಷರತ್ತುಗಳನ್ನು ವಿಧಿಸಿದೆ.

ಅಂತೆಯೇ ಎಸ್‌ಐಟಿ ಆಕೆಯನ್ನು ಬಂಧಿಸಬಾರದು ಎಂದು ಹೇಳಿರುವ ನ್ಯಾಯಾಲಯ ತನಿಖೆಯ ನೆಪದಲ್ಲಿ ಸಂಜೆ 5 ಗಂಟೆಯ ನಂತರ ಆಕೆಯನ್ನು ಕಚೇರಿಯಲ್ಲಿ ಉಳಿಸಿಕೊಳ್ಳಬಾರದು. ಮುಂದಿನ ದಿನಗಳಲ್ಲಿ ಆಕೆ ತನಿಖೆಗೆ ಹಾಜರಾಗುವವರೆಗೆ ಈ ಷರತ್ತುಗಳು ಜಾರಿಯಲ್ಲಿರುತ್ತವೆ ಎಂದು ನ್ಯಾಯಾಲಯ ತಿಳಿಸಿದೆ.

WhatsApp Group Join Now
Telegram Group Join Now
Share This Article