ರೇಣುಕಾಸ್ವಾಮಿ ಕೊಲೆ & ದರ್ಶನ್ ಅರೆಸ್ಟ್: ಪೊಲೀಸ್ ಆಯುಕ್ತರು ಹೇಳಿದ್ದೇನು?

Ravi Talawar
ರೇಣುಕಾಸ್ವಾಮಿ ಕೊಲೆ & ದರ್ಶನ್ ಅರೆಸ್ಟ್: ಪೊಲೀಸ್ ಆಯುಕ್ತರು ಹೇಳಿದ್ದೇನು?
WhatsApp Group Join Now
Telegram Group Join Now

ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನಕ್ಕೆ  ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಿದರು. ಜೂನ್ 9ರ ಶನಿವಾರ ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿರ ಶವ ಪತ್ತೆಯಾಗಿತ್ತು. ತನಿಖೆ ವೇಳೆ ಕೊಲೆಯಾದ ವ್ಯಕ್ತಿ ಚಿತ್ರದುರ್ಗ ಮೂಲದ 33 ವರ್ಷದ ರೇಣುಕಾಸ್ವಾಮಿ ಎಂದು ಗೊತ್ತಾಗಿದೆ.

ಕನ್ನಡ ಚಿತ್ರರಂಗದ ನಟ ಹಾಗೂ ಆತನ ಸಹಚರರನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕೊಲೆಯಾದ ವ್ಯಕ್ತಿ ನಟನ ಪತ್ನಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಸುಮಾರು 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡಲು ಆಗಲ್ಲ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ದರ್ಶನ್ ಆಪ್ತ ಮೈಸೂರಿನ ಬ್ಲ್ಯೂ ರಾಡಿಸನ್ ಹೋಟೆಲ್ ಮಾಲೀಕ, ಉದ್ಯಮಿ ವಿನಯ್ ಕಾರ್ ಶೆಡ್‌ನಲ್ಲಿ ಕೊಲೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆಯಾದ ರೇಣುಕಾಸ್ವಾಮಿ, ದರ್ಶನ್ ಫ್ಯಾನ್ ಅಸೋಸಿಯೇಷನ್ ಸದಸ್ಯನೂ ಆಗಿದ್ದನು. ದರ್ಶನ್ ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ.

ಇದರಿಂದ ಕೋಪಗೊಂಡ ದರ್ಶನ್, ಚಿತ್ರದುರ್ಗದ ಫ್ಯಾನ್ ಅಸೋಶಿಯೇಷನ್ ಅಧ್ಯಕ್ಷ ರಾಘವೇಂದ್ರ ಮೂಲಕ ರೇಣುಕಾಸ್ವಾಮಿಯನ್ನು ಕರೆಸಿಕೊಳ್ಳಲಾಗಿತ್ತು. ಕಾರ್ ಶೆಡ್‌ನಲ್ಲಿ ಕಬ್ಬಿಣದ ರಾಡ್‌ನಿಂದ ತಲೆ ಹೊಡೆಯಲಾಗಿದೆ. ಹಲ್ಲೆಯ ತೀವ್ರತೆ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ. ಈ ಸಂದರ್ಭದಲ್ಲಿ ದರ್ಶನ್ ಅಲ್ಲೇ ಇದ್ದರು ಎಂದು ತಿಳಿದು ಬಂದಿದೆ. ದರ್ಶನ್ ಆಪ್ತ ವಿನಯ್‌ನನ್ನು ಸಹ ಪೊಲೀಸರು ಬಂಧಿಸಿದ್ದಾರೆ.

WhatsApp Group Join Now
Telegram Group Join Now
Share This Article