ಬೆಂಗಳೂರು, ಜೂನ್.11: ಆಪ್ತೆ ಪವಿತ್ರಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ಕೊಲೆ ಮಾಡಲು ಸುಪಾರಿ ನೀಡಿದ್ದರು ಎಂಬ ಕಾರಣಕ್ಕೆ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ವಿಜಯನಗರ ಎಸಿಪಿ ಚಂದನ್ ತಂಡ ಮೈಸೂರಿನ ಫಾರ್ಮ್ಹೌಸ್ನಲ್ಲಿ ನಟ ದರ್ಶನ್ ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲೇ ಬೆಂಗಳೂರಿನ ನಟ ದರ್ಶನ್ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಫ್ಯಾನ್ಸ್ಗಳಿಂದ ಏನಾದ್ರು ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಸದ್ಯ ದರ್ಶನ್ ಮನೆ ಬಳಿ ಯಾರು ಕೂಡ ಇಲ್ಲ ಎಂದು ತಿಳಿದುಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ. ಈ ಹಿನ್ನೆಲೆ ನಟ ದರ್ಶನ್, ಚಿತ್ರದುರ್ಗದ ದರ್ಶನ್ ಫ್ಯಾನ್ ಸಂಘಟನೆ ಅಧ್ಯಕ್ಷನಿಗೆ ಫೋನ್ ಕಾಲ್ ಮಾಡಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನ ಕರೆತರುವಂತೆ ಹೇಳಿದ್ದರು.