ಕ್ರಮ ಮದ್ಯ ಸಾಗಣೆ ತಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

Ravi Talawar
ಕ್ರಮ ಮದ್ಯ ಸಾಗಣೆ ತಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ
WhatsApp Group Join Now
Telegram Group Join Now

ಬೆಂಗಳೂರು: ನೆರೆ ರಾಜ್ಯಗಳಿಂದ ರಾಜ್ಯಕ್ಕೆ ಅಕ್ರಮ ಮದ್ಯ ಸಾಗಣೆಯಾಗುವುದನ್ನ ತಡೆಯುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಬಕಾರಿ ಇಲಾಖೆಯ ತೆರಿಗೆ ಸಂಗ್ರಹ ಸಾಮಥ್ರ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.

ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡಬೇಕು. ಇಲಾಖೆಯಲ್ಲಿ ಕಾನ್ಸ್ ಟೇಬಲ್, ಸಬ್ ಇನ್ಸ್‍ಪೆಕ್ಟರ್ ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದರು. ಇದೇ ವೇಳೆ ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಿದರು.

ಆನ್‍ಲೈನ್‍ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

 

WhatsApp Group Join Now
Telegram Group Join Now
Share This Article