ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ನೀಡುವ ಅತ್ಯುತ್ತಮ ಸೇವಾ ಪ್ರಶಸ್ತಿ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ 65 ಮಂದಿ ಸಿಬ್ಬಂದಿ ಭಾಜನರಾಗಿದ್ದಾರೆ.
13 ಹೋಮ್ ಗಾರ್ಡ್ಗಳು ಮತ್ತು ಇಬ್ಬರು ಸಿವಿಲ್ ಡಿಫೆನ್ಸ್ ಸಿಬ್ಬಂದಿ ಸೇರಿದಂತೆ 65 ಅಗ್ನಿಶಾಮಕ ಸಿಬ್ಬಂದಿಗೆ ಮಂಗಳವಾರ ಮುಖ್ಯಮಂತ್ರಿಗಳ ಪದಕವನ್ನು ನೀಡಿ ಅವರ ಅಪ್ರತಿಮ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.
ಅಗ್ನಿಶಾಮಕ ಸಿಬ್ಬಂದಿಗೆ ಸಿಎಂ ಪದಕವನ್ನು ನೀಡಿ ಗೌರವಿಸಿದ ಬಳಿಕ, ಕೊಳವೆಬಾವಿಗೆ ಹಿದ್ದ ಮಗುವನ್ನು ರಕ್ಷಿಸುವ ಮೂಲಕ ಶೌರ್ಯ ಪ್ರದರ್ಶಿಸಿದ ಒಂಬತ್ತು ಮಂದಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ಇಬ್ಬರು ಸೇರಿದಂತೆ 11 ಅಗ್ನಿಶಾಮಕ ಸಿಬ್ಬಂದಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸನ್ಮಾನಿಸಿದರು.
ವಿಜಯಪುರದಲ್ಲಿ ಏಪ್ರಿಲ್ 3 ರಂದು 205 ಅಡಿ ಕೊಳವೆಬಾವಿಗೆ ಬಿದ್ದ ಎರಡೂವರೆ ವರ್ಷದ ಬಾಲಕನ ರಕ್ಷಣಾ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಅಗ್ನಿಶಾಮಕ ಸಿಬ್ಬಂದಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಪರಮೇಶ್ವರ್ ಅವರು HPCL ಪೆಟ್ರೋಲಿಯಂ ಸಹಯೋಗದೊಂದಿಗೆ ‘ಪೆಟ್ರೋ ಕಾರ್ಡ್’ ಅನ್ನು ಬಿಡುಗಡೆ ಮಾಡಿದರು.