ಉತ್ತರಕಾಂಡದ ವೀರವ್ವನಾಗಿ  ಭಾವನಾ ಮೆನನ್ 

Ravi Talawar
ಉತ್ತರಕಾಂಡದ ವೀರವ್ವನಾಗಿ  ಭಾವನಾ ಮೆನನ್ 
WhatsApp Group Join Now
Telegram Group Join Now
ಬಹು ನಿರೀಕ್ಷಿತ ಚಿತ್ರ ‘ಉತ್ತರಕಾಂಡ’ದಲ್ಲಿ ಬಹುಭಾಷಾ‌ ತಾರೆ ಭಾವನಾ ಮೆನನ್  ‘ವೀರವ್ವ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಭಾವನಾ‌ ಅವರ‌ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರ ತಂಡ ಪೋಸ್ಟರ್ ಬಿಡುಗಡೆ ಮಾಡಿದೆ.
     ರೋಹಿತ್ ಪದಕಿ ನಿರ್ದೇಶನದ ‘ಉತ್ತರಕಾಂಡ’ ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಸೆಂಚುರಿ ಸ್ಟಾರ್  ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ‌ ಧನಂಜಯ, ಐಶ್ವರ್ಯ ರಾಜೇಶ್, ದಿಗಂತ್ ಮಂಚಾಲೆ, ರಂಗಾಯಣ ರಘು, ಚೈತ್ರ ಆಚಾರ್,ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಹಣವಿದೆ. ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ. ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಿಸಿದ್ದಾರೆ.
WhatsApp Group Join Now
Telegram Group Join Now
Share This Article