ಬೆಂಗಳೂರು, ಜೂನ್ 14: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ 94.73 ಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ಮೊತ್ತವನ್ನು ಮದ್ಯದಂಗಡಿಗಳು , ಚಿನ್ನಾಭರಣ ಮಾರಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳಿಗೆ ವರ್ಗಾಯಿಸಿಕೊಂಡು ನಗದು ಹಣ ಪಡೆದಿರುವುದು ವಿಶೇಷ ತನಿಖಾ ತಂಡ ತನಿಖೆಯಲ್ಲಿ ಬಯಲಾಗಿದೆ.
ಪ್ರಕರಣ ಸಂಬಂಧ ಹೈದರಾಬಾದ್ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಆರೋಪದಡಿ ಎಸ್ಐಟಿ ಅಧಿಕಾರಿಗಳು ಹೈದರಾಬಾದ್ನಲ್ಲಿ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್ ಬಂಧಿಸಿ ಬುಧವಾರ ನಗರಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಈ ವಿಚಾರ ಬಾಯಿ ಬಿಟ್ಟಿದ್ದಾರೆ.