ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿಗೆ : ಕೇಂದ್ರ ಸಚಿವ ಮೇಘವಾಲ್

Ravi Talawar
ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿಗೆ : ಕೇಂದ್ರ ಸಚಿವ ಮೇಘವಾಲ್
WhatsApp Group Join Now
Telegram Group Join Now

ನವದೆಹಲಿ : ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರುಪರಿಶೀಲಿಸುತ್ತಿಲ್ಲ ಎಂದು ಕಾನೂನು ಮತ್ತು ನ್ಯಾಯ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ. ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಪುನರುಚ್ಚರಿಸಿದರು.

ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1, 2024 ರಿಂದ ಜಾರಿಗೆ ಬರಲಿವೆ ಎಂದು ಹೇಳಿದರು.

“ಐಪಿಸಿ, ಸಿಆರ್​ಪಿಸಿ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆಯನ್ನು ಅನುಸರಿಸಿದ ನಂತರ ಮತ್ತು ಭಾರತದ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.

“ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ಹೇಳಿದರು.

ಹೊಸ ಕಾನೂನುಗಳ ಬಗ್ಗೆ ಬ್ಯೂರೋ ಆಫ್ ಪೊಲೀಸ್ ರಿಸರ್ಚ್ ಅಂಡ್ ಡೆವಲಪ್​​ಮೆಂಟ್ (ಬಿಪಿಆರ್ ಡಿ) ತರಬೇತಿ ನೀಡಲಿದೆ ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Share This Article