ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಹಾಸ್ಯನಟ ಚಿಕ್ಕಣ್ಣಗೆ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ

Ravi Talawar
ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಹಾಸ್ಯನಟ ಚಿಕ್ಕಣ್ಣಗೆ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ
WhatsApp Group Join Now
Telegram Group Join Now

ನಟ ದರ್ಶನ್  ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಇದು ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಸಹಜವಾಗಿಯೇ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ ಹಾಸ್ಯನಟ ಚಿಕ್ಕಣ್ಣಗೆ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಅವರಿಗೆ ನೋಟಿಸ್ ಹೋಗಲು ಕಾರಣ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ನಟ ದರ್ಶನ್​​ ಶೆಡ್​ಗೆ ಹೋಗುವ ಮೊದಲು ಖಾಸಗಿ ರೆಸ್ಟೋರೆಂಟ್​ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿರ್ಮಾಪಕರು ಭಾಗಿಯಾಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು ಪಟ್ಟಣಗೆರೆ ಶೆಡ್​ಗೆ. ಪಾರ್ಟಿ ಮುಗಿಸಿ ಬಂದು ಹಲ್ಲೆಗೈದು ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್​ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು (ಜೂನ್ 17) ಸಂಜೆಯೇ ನೋಟಿಸ್ ನೀಡಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.

WhatsApp Group Join Now
Telegram Group Join Now
Share This Article