ಮುನಿರತ್ನಗೆ ಮತ್ತೊಂದು ಸಂಕಷ್ಟ! ತನಿಖೆಯಲ್ಲಿ ರಜುವಾತಾದ ಹನಿಟ್ರ್ಯಾಪ್ ಆರೋಪ; ನ್ಯಾಯಾಲಯಕ್ಕೆ 2,481 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ

Ravi Talawar
ಮುನಿರತ್ನಗೆ ಮತ್ತೊಂದು ಸಂಕಷ್ಟ! ತನಿಖೆಯಲ್ಲಿ ರಜುವಾತಾದ ಹನಿಟ್ರ್ಯಾಪ್ ಆರೋಪ; ನ್ಯಾಯಾಲಯಕ್ಕೆ 2,481 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ
WhatsApp Group Join Now
Telegram Group Join Now

ಬೆಂಗಳೂರು, ಡಿಸೆಂಬರ್​ 28: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿರುವ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ತನಿಖೆಯಲ್ಲಿ ರಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಸಿದೆ.

ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಒಟ್ಟು ಏಳು ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್​​ಐಟಿ ರಚಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಎಸ್​ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣ ಸಂಬಂಧ ಎಸ್​ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್​ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಎಸ್​ಐಟಿ ಸಲ್ಲಿಕೆ ಮಾಡಿದೆ.

WhatsApp Group Join Now
Telegram Group Join Now
Share This Article