ಬಳ್ಳಾರಿ,ನ.13. ಯಾವುದೇ ವೈದ್ಯಕೀಯ ಪದವಿ ಪಡೆಯದೇ ಜನತೆಗೆ ತಾನು ವೈದ್ಯನೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಸಂಡೂರಿನ ತೋರಣಗಲ್ಲು ಗ್ರಾಮದ ಅಭಿಲಾಷ್ ಕ್ಲಿನಿಕ್ ನ ಬಿ.ಎನ್.ವೀರೇಶ್ ಎಂಬುವನ ಕ್ಲಿನಿಕ್ ನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದ್ದಾರೆ.
ಬಿ.ಎನ್.ವೀರೇಶ್ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಕೇವಲ 10ನೇ ತರಗತಿಯವರೆಗೆÀ ವಿದ್ಯಾಭ್ಯಾಸ ಮಾಡಿ ಔಷಧಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದನು.
ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಆದೇಶದ ಮೇರೆಗೆ ಸಂಡೂರು ತಾಲ್ಲೂಕು ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಕ್ಷಯರೋಗ ನಿರ್ಮೂನಾಧಿಕಾರಿ ಡಾ.ಇಂದ್ರಾಣಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಭರತ್ ನೇತೃತ್ವದ ತಂಡವು ದಾಳಿ ನಡೆಸಿ, ಕ್ಲಿನಿಕ್ ನ್ನು ಸೀಜ್ ಮಾಡಿ ಜಿಲ್ಲಾಧಿಕಾರಿಗಳ ಮುಂದಿನ ಕ್ರಮಕ್ಕಾಗಿ ವರದಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಆರೋಗ್ಯದ ದೃಷ್ಟಿಯಿಂದ ಅಧಿಕೃತ ವೈದ್ಯ ಪದವಿ ಪಡೆದ ವೈದ್ಯರ ಬಳಿ ತಪಾಸಣೆ ಮಾಡಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳನ್ನು ತಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ಸಾರ್ವಜನಿಕರಲ್ಲಿ ಕೋರಿದ್ದಾರೆ.
ಹಾಗಾಗಿ ಗ್ರಾಮಗಳಲ್ಲಿ ವೈದ್ಯ ವೃತ್ತಿ ಮಾಡುತ್ತಿರುವವರು ಕಂಡುಬAದಲ್ಲಿ, ಅವರ ವೈದ್ಯಕೀಯ ಪದವಿ ಮಾಹಿತಿ ಪಡೆದುಕೊಂಡು ಚಿಕಿತ್ಸೆ ಪಡೆಯಬೇಕು. ನಕಲಿ ವೈದ್ಯರು ಎಂದು ಕಂಡುಬAದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯಕ್ಕೆ ದೂರು ನೀಡಿದರೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರಡಿ ಕ್ರಮ ಜರುಗಿಸಲಾಗುವುದು.
ದಾಳಿಯ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಂಡೆಗೌಡ, ಆರೋಗ್ಯ ನಿರೀಕ್ಷಣಾಧಿಕಾರಿ ನಿಜಾಮುದ್ದೀನ್ ಹಾಜರಿದ್ದರು.