ರಾಜ್ಯದ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್  ಸಂಪೂರ್ಣ ನಿಷೇಧ

Ravi Talawar
ರಾಜ್ಯದ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್  ಸಂಪೂರ್ಣ ನಿಷೇಧ
WhatsApp Group Join Now
Telegram Group Join Now

 

ವಿಧಾನಪರಿಷತ್ತು(ಬೆಂಗಳೂರು): ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ಪ್ರಶೋತ್ತರ ವೇಳೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ದೇವಾಲಯದ ಆವರಣ ಸ್ವಚ್ಛತೆ ಕಾಪಾಡಲು ಹಾಗೂ ಪರಿಣಾಮಕಾರಿಯಾಗಿ ಪ್ಲಾಸ್ಟಿಕ್ ನಿಷೇಧಿಸುವಂತೆ ಸೂಚಿಸಲಾಗಿದೆ‌.‌ ಇದೇ ತಿಂಗಳು 15ರಿಂದ ಆದೇಶ ಜಾರಿ ಬರಲಿದೆ ಎಂದರು.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದೆ‌. ನಿಯಮ ಉಲ್ಲಂಘಿಸಿರುವುದು ಕಂಡುಬಂದರೆ ದಂಡ ವಿಧಿಸುವಂತೆ ಸಂಬಂಧಪಟ್ಟ ದೇವಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ‌. ದೇವಾಲಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳು ಬಳಸುತ್ತಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಿಳಿಸಲಾಗಿದೆ ಎಂದರು.

WhatsApp Group Join Now
Telegram Group Join Now
Share This Article