ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರದ ಕುರಿತು ಸಂವಾದ ಕಾರ್ಯಕ್ರಮ

Ravi Talawar
ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರದ ಕುರಿತು ಸಂವಾದ ಕಾರ್ಯಕ್ರಮ
WhatsApp Group Join Now
Telegram Group Join Now

ಗದಗ ಜೂನ್ 14:  ಕರ್ನಾಟಕ  ರಾಜ್ಯ ಉಪಲೋಕಾಯುಕ್ತ  ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿಂದ ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಜೂನ್ 15 ರಂದು ಬೆಳಿಗ್ಗೆ 9.45 ರಿಂದ 10.45 ಗಂಟೆಯವರೆಗೆ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರದ ಕುರಿತು ವಕೀಲರೊಂದಿಗೆ ಸಂವಾದ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉದ್ಘಾಟಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಂ.ಐ.ಹಿರೇಮನಿ ಪಾಟೀಲ ವಹಿಸುವರು.

ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ  ಬಸವರಾಜ,  ಕರ್ನಾಟಕ ಲೋಕಾಯುಕ್ತ  ಸಂಪನ್ಮೂಲ ಅಧಿಕಾರಿ ಪ್ರಕಾಶ ಎಲ್ ನಾಡಗೇರ,   ಕರ್ನಾಟಕ ಲೋಕಾಯುಕ್ತ ಉಪನಿಬಂಧಕರಾದ ಅಮರನಾರಾಯಣ ಕೆ,  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ, ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ.ಪಾಟೀಲ ಆಗಮಿಸುವರು.

ಕರ್ನಾಟಕ ಲೋಕಾಯುಕ್ತ  ಗದಗ ಕಚೇರಿಯ ಪೊಲೀಸ ಅಧೀಕ್ಷಕರಾದ  ಸತೀಶ ಚಿಟಗುಬ್ಬಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

WhatsApp Group Join Now
Telegram Group Join Now
Share This Article