ವೃದ್ಧ ಅತ್ತೆ-ಮಾವನ ಮೇಲೆ ಪ್ರಸಿದ್ದ ಸರ್ಕಾರಿ ಆಸ್ಪತ್ರೆ ವೈದ್ಯೆ ಹಲ್ಲೆ

Ravi Talawar
ವೃದ್ಧ ಅತ್ತೆ-ಮಾವನ ಮೇಲೆ ಪ್ರಸಿದ್ದ ಸರ್ಕಾರಿ ಆಸ್ಪತ್ರೆ ವೈದ್ಯೆ ಹಲ್ಲೆ
WhatsApp Group Join Now
Telegram Group Join Now

ಬೆಂಗಳೂರು: ಅತ್ತೆ ಹಾಗೂ ಮಾವನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಸರ್ಕಾರಿ ಆಸ್ಪತ್ರೆಯ ವೈದ್ಯೆ ಪ್ರಿಯದರ್ಶಿನಿ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವೈದ್ಯೆ ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇ.ಎಸ್‌.ಐ ಆಸ್ಪತ್ರೆಯ ದಂತ ವೈದ್ಯ ನವೀನ್ ಕುಮಾರ್ ಮತ್ತು ವಿಕ್ಟೋರಿಯಾ ಆಸ್ಪತ್ರೆ ವೈದ್ಯೆ ಪ್ರಿಯದರ್ಶಿನಿ 2007ರಲ್ಲಿ ವಿವಾಹ ಆಗಿದ್ದರು. ದಂಪತಿ ಮಧ್ಯೆ ವೈಮನಸ್ಸು ಉಂಟಾಗಿ ವಿಚ್ಛೇದನ ಪಡೆಯಲು ಮುಂದಾಗಿದ್ದರು. ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ರಾತ್ರಿ 8.30 ರಿಂದ ರಾತ್ರಿ 9 ಗಂಟೆಯ ನಡುವೆ ಈ ಘಟನೆ ನಡೆದಿದ್ದು, ಮಂಗಳವಾರ ಬೆಳಗಿನ ಜಾವ ದೂರು ದಾಖಲಿಸಲಾಗಿದೆ. ಅತ್ತೆ– ಮಾವನಿಗೆ ಪ್ರಿಯದರ್ಶಿನಿ ಕಿರುಕುಳ ನೀಡುತ್ತಿರುವ ಆರೋಪವಿದೆ. ಹೀಗಾಗಿ, ಪೋಷಕರೊಂದಿಗೆ ನವೀನ್‌ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಪ್ರಿಯದರ್ಶಿನಿ ಮಕ್ಕಳ ಜೊತೆ ವಾಸವಾಗಿದ್ದಾರೆ.

ವೈದ್ಯರು ವೃದ್ಧ ದಂಪತಿಗಳ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ, ವೈದ್ಯೆ ಪ್ರಿಯದರ್ಶಿನಿತನ್ನ ಗಂಡನ ವೃದ್ಧ ಪೋಷಕರ ಮೇಲೆ ಕೂಗುತ್ತಾ ಅವರೊಂದಿಗೆ ಜಗಳವಾಡುತ್ತಿರುವುದನ್ನು ಕಾಣಬಹುದು. ಅವರು ಅತ್ತೆಯ ಮಂಗಳಸೂತ್ರವನ್ನು ಎಳೆಯುವುದನ್ನು ಮತ್ತು ಮತ್ತೊಬ್ಬ ಮಹಿಳೆ ಮಾವನನ್ನು ಒದೆಯುವುದನ್ನು ಸಹ ಕಾಣಬಹುದಾಗಿದೆ.

WhatsApp Group Join Now
Telegram Group Join Now
Share This Article