ಹೊಸ ಮನೆ ಕೊಂಡ ದಂಪತಿ ಸಂತಸದಲ್ಲೇ ಘೋರ ಗುಡ್ಡ ಕುಸಿತದಲ್ಲಿ ಜಲಸಮಾಧಿ

Ravi Talawar
ಹೊಸ ಮನೆ ಕೊಂಡ ದಂಪತಿ ಸಂತಸದಲ್ಲೇ ಘೋರ ಗುಡ್ಡ ಕುಸಿತದಲ್ಲಿ  ಜಲಸಮಾಧಿ
WhatsApp Group Join Now
Telegram Group Join Now

ಚಾಮರಾಜನಗರ, ಜುಲೈ 31: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಘೋರ ಗುಡ್ಡ ಕುಸಿತದಲ್ಲಿ  ಚಾಮರಾಜನಗರ  ಜಿಲ್ಲೆಯ ನಾಲ್ವರು ಮೃತಪಟ್ಟಿದ್ದಾರೆ.

50 ವರ್ಷದ ರಾಜೇಂದ್ರ, 45 ವರ್ಷದ ರತ್ನಮ್ಮ, 62 ವರ್ಷದ ಪುಟ್ಟಸಿದ್ದಶೆಟ್ಟಿ ಮತ್ತು 50 ವರ್ಷದ ರಾಣಿ ಎಂಬವರು ಸಾವನಪ್ಪಿದ್ದಾರೆ. ಇವರೆಲ್ಲರೂ ಚಾಮರಾಜನಗರ ಜಿಲ್ಲೆಯವರು. ರಾಜೇಂದ್ರ ಮತ್ತು ರತ್ನಮ್ಮ ದಂಪತಿ ಮೂಲತಃ ಚಾಮರಾಜನಗರ ತಾಲೂಕಿನ ಇರಸವಾಡಿ ನಿವಾಸಿಗಳಾಗಿದ್ದು, ವಯನಾಡಿನ ಚೂರಲ್ ​ಮಲೈನಲ್ಲಿ ವಾಸವಾಗಿದ್ದರು.

ಕೂಲಿ ಮಾಡಿ ಕೇರಳದಲ್ಲಿ ಬದುಕು ಕಟ್ಟಿಕೊಂಡಿದ್ದ ದಂಪತಿ ಆರು ತಿಂಗಳ ಹಿಂದೆಯಷ್ಟೇ ಹೊಸಮನೆ ಖರೀದಿಸಿದ್ದರು. ಸಂಬಂಧಿಕರು, ಸ್ನೇಹಿತರನ್ನು ಕರೆದು ಗೃಹಪ್ರವೇಶ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಿದ್ದರು. ಈಗ ದುರಂತದಲ್ಲಿ ದಂಪತಿ ಮನೆ ಸಮೇತ ಜಲಸಮಾಧಿಯಾಗಿದ್ದಾರೆ. ಈ ಇಬ್ಬರ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಚಾಮರಾಜನಗರದ ಜಿಲ್ಲೆಯ ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಯನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಗುಂಡ್ಲುಪೇಟೆ ತಹಶೀಲ್ದಾರ್ ರಮೇಶ್ ಬಾಬು ಮೃತರ ಕುಟುಂಬದವರ ಜತೆ ಸಂಪರ್ಕದಲ್ಲಿದ್ದಾರೆ.

WhatsApp Group Join Now
Telegram Group Join Now
Share This Article