ಬೆಳಗಾವಿ: ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿ ಇಂದು ಕುಂದಾನಗರಿಗೆ ಆಗಮಿಸಿದ ಅವರಿಗೆ ಕೈ ಕಾರ್ಯಕರ್ತರಿಂದ ಹಾಗೂ ಅವರು ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಕೋರಲಾಯಿತು.
ಹೌದು…. ರಾಹುಲ್ ಜಾರಕಿಹೊಳಿ ಅವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿ ಮೊದಲ ಭಾರಿಗೆ ಇಂದು ಕಾಂಗ್ರೆಸ್ ಭವನಕ್ಕೆ ಆಗಮಿಸಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಜಾರಕಿಹೊಳಿ ಅವರಿಗೆ ಜಯಘೋಷಗಳನ್ನು ಕೂಗುವ ಮೂಲಕ ಸಂಭ್ರಮಿಸಿದರು. ಈ “ಕೈ” ಸಂಭ್ರಮದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು- ಕಾರ್ಯಕರ್ತರು ಈ ಸಂಭ್ರಮದಲ್ಲಿ ಭಾಗಿಯಾದರು.
ಮುಗಿಲು ಮುಟ್ಟಿದ ಸಂಭ್ರಮ: ಕಾಂಗ್ರೆಸ್ ಭವನ ಮುಂಭಾಗದಲ್ಲಿ ಜಮಾವನೆಗೊಂಡ ಪಕ್ಷದ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ಮಾತ್ರವಲ್ಲ ಪರಸ್ಪರ ಗುಲಾಲು ಎರಚಿ ಖುಷಿಪಟ್ಟರೆ, ಇನ್ನು ಕೆಲ ಕಾರ್ಯಕರ್ತರು ಪರಸ್ಪರ ಸಿಹಿ ಹಂಚುವ ಮೂಲಕ ಕುಣಿದು ಕುಪ್ಪಳಿಸಿದರು. ರಾಹುಲ್ ಜಾರಕಿಹೊಳಿ ಅವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಜಾರಕಿಹೊಳಿ ಅವರಿಗೆ ಜಯಘೋಷ ಮೊಳಗಿಸಿದರು.
ರಾಹುಲ್ ಗೆ ಶುಭ ಕೋರಿದ ಅಭಿಮಾನಿಗಳು: ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ಆಯ್ಕೆಯಾದ ನಿಮಿತ್ತ ಅವರಿಗೆ ಶುಭ ಕೋರಲೆಂದೆ ನೂರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಕಾಂಗ್ರೆಸ್ ಭವನಕ್ಕೆ ಆಗಮಿಸಿದ್ದರು. ವೇದಿಕೆ ಮೇಲೆ ನಿಂತ ರಾಹುಲ್ ಜಾರಕಿಹೊಳಿ ಭೇಟಿಗೆ ಸರದಿ ಸಾಲಿನಲ್ಲಿ ನಿಂತ ಅಭಿಮಾನಿಗಳು ಓಬ್ಬೊಬ್ಬರಾಗಿ ಆಗಮಿಸಿ ರಾಹುಲ್ ಅವರಿಗೆ ಹುಗುಚ್ಚ ನೀಡುವ ಮೂಲಕ ಶುಭ ಕೋರಿದರು. ಅಲ್ಲದೇ ಅನೇಕ ಅಭಿಮಾನಿಗಳು ರಾಹುಲ್ ಅವರ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸ ಪಟ್ಟರು.
ಮಾಸ್ಟರ್ ಮೈಂಡ್ ಎನ್ನುವುದನ್ನು ಸಾಬೀತು ಪಡೆಸಿದ ಸಾಹುಕಾರ್: ಎದುರಾಳಿಗಳ ಎದೆ ನಡುಗಿಸಿದ ಸಾಹುಕಾರ್: ಬೆಳಗಾವಿಯಲ್ಲಿ ಸತೀಶ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳು ಜನಜನಿತ. ಅತ್ಯಂತ ಸರಳ ಸಜ್ಜನ ರಾಜಕಾರಣಿಯಾಗಿ ಸತೀಶ ಜಾರಕಿಹೊಳಿ ಅವರು ದಿನೇ ದಿನೇ ರಾಜ್ಯ ರಾಜಕಾರಣದಲ್ಲಿ ಮೇಲಕ್ಕೆ ಏರುತ್ತಿರುವುದು ವಿಶೇಷವಾಗಿದೆ. ಈ ಬಾರಿಯ ನಡೆದ ಲೋಕ ಚುನಾವಣೆಯಲ್ಲಿ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅವರು ತಾವೊಬ್ಬ ಮಾಸ್ಟರ್ ಮೈಂಡ್ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದ್ದಾರೆ.
ರಾಹುಲ್ ಗೆ ಸಾಥ ನೀಡಿದ ಕೈ ಮುಖಂಡರು: ರಾಹುಲ್ ಜಾರಕಿಹೊಳಿ ಅವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿ ಮೊದಲ ಭಾರಿಗೆ ಬೆಳಗಾವಿಗೆ ಆಗಮಿಸಿದ ವೇಳೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ರಾಹುಲ್ ಹಣೆಗೆ ತಿಲಕ ಹಚ್ಚಿ ಆರತಿ ಬೆಳಗಿ ಶುಭ ಕೋರಿದರು . ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ .ಜೆ , ಕೆಪಿಸಿಸಿ ಅಧ್ಯಕ್ಷ ಮಲಗೌಡ ಪಾಟೀಲ್, ಜಿಪಂ ಸದಸ್ಯರಾದ ಮಹಾಂತೇಶ ಮಗದುಮ್ಮ, ಬೆಳಗಾವಿ ಗ್ರಾಮೀಣ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತೀಕ್ ಪಾಟೀಲ್, ಬಸವರಾಜ ಶಿಗ್ಗಾಂವಿ, ಚಿಕ್ಕೋಡಿ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷ ಸಿದ್ದಕಿ ಅಂಕಲಗಿ, ರಾಜಾ ಸಲೀಂ ಸೇರಿದಂತೆ ಅನೇಕ ಕೈ ಮುಖಂಡರು ಈ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರಿಗೆ ಸಾಥ್ ನೀಡಿದರು.
ಕೈ ಮೇಲೆಳಲು ಸಾಹುಕಾರ್ ರೂವಾರಿ: ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಾಲಿಗೆ ಸತೀಶ ಜಾರಕಿಹೊಳಿ ಬಹುದೊಡ್ಡ ನಾಯಕರಾಗಿ ಹೊರಹೊಮ್ಮಿರುವುದು ಈ ಬಾರಿಯ ಲೋಕಸಭಾ ಚುನಾವಣೆ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಮತ್ತೆ ಸಾಬೀತಾಗಿದೆ. ಬಿಜೆಪಿಯ ಭದ್ರಕೋಟೆಯಾಗಿ ಕೈ ಪಕ್ಷದ ಭಾವುಟ ಹಾರಾಡುವಲ್ಲಿ ಹಿಂದಿನ ರೂವಾರಿಯೇ ಸತೀಶ ಜಾರಕಿಹೊಳಿಯವರಾಗಿದ್ದಾರೆ.
ಅವರ ಅಮೋಘ ಕಾರ್ಯತಂತ್ರದ ಫಲವಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಚಿಕ್ಕೋಡಿಯಲ್ಲಿ ಗೆದ್ದಿದೆ. ಸತೀಶ ಜಾರಕಿಹೊಳಿ ಅವರ ಪರಿಶ್ರಮದಿಂದ ಎಲ್ಲ ಕ್ಷೇತ್ರಗಳು ಕಾಂಗ್ರೆಸ್ ಬಗಲಿಗೆ ಸೇರ್ಪಡೆಗೊಂಡಿವೆ. ಈ ಮೂಲಕ ಸತೀಶ ಜಾರಕಿಹೊಳಿ ಅವರು ತಮ್ಮ ಮಾಸ್ಟರ್ ಮೈಂಡ್ ರಾಜಕಾರಣದ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಗತ ವೈಭವವನ್ನು ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ತಂದುಕೊಟ್ಟ ಹಿರಿಮೆಗೆ ಪಾತ್ರರಾಗಿದ್ದಾರೆ. ಒಟ್ಟಾರೆ ಈ ಭಾರಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅತ್ಯಧಿಕ ಮತ ಪಡೆಯುವ ಮೂಲಕ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಸುಪುತ್ರರಾದ ರಾಹುಲ್ ಜಾರಕಿಹೊಳಿ ಅವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಗಿದ್ದು, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟುವಂತೆ ನಿರ್ಮಾಣವಾಗಿದ್ದಂತೂ ಸತ್ಯ.