ಅಭಿಮಾನ್‌ ಸ್ಟುಡಿಯೋ ಸೀಜ್‌ ಮಾಡಲು ಡಿಸಿಗೆ ಅರಣ್ಯಾಧಿಕಾರಿ ಪತ್ರ

Ravi Talawar
ಅಭಿಮಾನ್‌ ಸ್ಟುಡಿಯೋ ಸೀಜ್‌ ಮಾಡಲು ಡಿಸಿಗೆ ಅರಣ್ಯಾಧಿಕಾರಿ ಪತ್ರ
WhatsApp Group Join Now
Telegram Group Join Now

ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಈ ಜಾಗದಲ್ಲಿ ಸ್ಮಾರಕ ನಿರ್ಮಾಣ ಆಗಬೇಕು ಎಂದು ವಿಷ್ಣುವರ್ಧನ್ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಡಿಸಿಗೆ ಅರಣ್ಯ ಅಧಿಕಾರಿ ಪತ್ರ ಬರೆದಿದ್ದಾರೆ. ಈ ಪತ್ರ ವೈರಲ್ ಆಗಿದೆ. ಈ ಪತ್ರದಲ್ಲಿ ನಿಯಮ ಉಲ್ಲಂಘನೆ ಬಗ್ಗೆ ಬರೆಯಲಾಗಿದೆ.

ಬಾಲಕೃಷ್ಣ ಅವರಿಗೆ 1970ರಲ್ಲಿ ಸ್ಟುಡಿಯೋ ನಿರ್ಮಾಣದ ಉದ್ದೇಶಕ್ಕೆ  20 ಎಕರೆ ಭೂಮಿಯನ್ನು 20 ವರ್ಷ ಲೀಸ್​​ಗೆ ನೀಡಾಗಿತ್ತು. ನಂತರ ಲೀಸ್ ಅವಧಿ ವಿಸ್ತರಣೆ ಮಾಡಿಕೊಳ್ಳಲಾಯಿತು. 2004ರಲ್ಲಿ ಆರ್ಥಿಕ ಸಂಕಷ್ಟದ ನೆಪ ಹೇಳಿ ಬಾಲಕೃಷ್ಣ ಮಕ್ಕಳಾದ ಶ್ರೀನಿವಾಸ್ ಹಾಗೂ ಗಣೇಶ್ ಜಿಲ್ಲಾಧಿಕಾರಿಗಳ ಬಳಿ  10 ಎಕರೆ ಮಾರಲು ಒಪ್ಪಿಗೆ ಕೇಳಿದ್ದರು ಎನ್ನಲಾಗಿದೆ. ಜಿಲ್ಲಾಧಿಕಾರಿಗಳ ವಿಶೇಷ ಅಧಿಕಾರ ಬಳಸಿ ಇದ್ದನ್ನು ಮಾರಲಾಯಿತು ಎನ್ನಲಾಗಿದೆ.  ಮಾರಾಟದಿಂದ ಬಂದ ಹಣವನ್ನು ಸ್ಟುಡಿಯೋ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಿಕೊಳ್ಳೋದಾಗಿ ಅವರು ಸರ್ಕಾರಕ್ಕೆ ಹೇಳಿದ್ದರು.

ಆದರೆ, ಈವರೆಗೆ ಸ್ಟುಡಿಯೋ ಯಥಾ ಸ್ಥಿತಿಯಲ್ಲೇ ಇದೆ. ಈವರೆಗೆ ಇದರ ಅಭಿವೃದ್ಧಿ ಆಗಿಲ್ಲ. ಈಗ ಬಾಲಕೃಷ್ಣ ಮೊಮ್ಮಗ ಕಾರ್ತಿಕ್ ಅವರು ಈ ಜಮೀನನ್ನು ಮಾರಲು ಪ್ಲ್ಯಾನ್ ಮಾಡಿದ್ದರು. 1 ಎಕರೆಗೆ 14 ಕೋಟಿ ರೂಪಾಯಿಯಂತೆ ಮಾರಲು ಪ್ಲ್ಯಾನ್ ನಡೆದಿತ್ತು. ಈ ವಿಚಾರ ಅರಣ್ಯಾಧಿಕಾರಿಗೆ ಗೊತ್ತಾಗಿದೆ. ಹೀಗಾಗಿ, ಇದನ್ನು ವಶಕ್ಕೆ ಪಡೆಯುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಕೋರಿದ್ದಾರೆ.

WhatsApp Group Join Now
Telegram Group Join Now
Share This Article