ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿ, 2 ಸಾವಿರಕ್ಕೂ ಅಧಿಕ ಮಂದಿ ಭೂಸಮಾಧಿ

Ravi Talawar
ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿ, 2 ಸಾವಿರಕ್ಕೂ ಅಧಿಕ ಮಂದಿ ಭೂಸಮಾಧಿ
WhatsApp Group Join Now
Telegram Group Join Now

ಪೋರ್ಟ್ ಮೋರೆಸ್ಬಿ: ಪಪುವಾ ನ್ಯೂಗಿನಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿ, 2 ಸಾವಿರಕ್ಕೂ ಅಧಿಕ ಮಂದಿ ಭೂಸಮಾಧಿಯಾಗಿದ್ದಾರೆ ಎಂದು ಪಪುವಾ ನ್ಯೂಗಿನಿಯಾ ರಾಷ್ಟ್ರೀಯ ವಿಪತ್ತು ಕೇಂದ್ರ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ.

ದ್ವೀಪರಾಷ್ಟ್ರದ ಉತ್ತರದಲ್ಲಿರುವ ಎಂಗಾ ಪ್ರಾಂತದ ಯಂಬಾಲಿ ಹಳ್ಳಿಯ ಬೆಟ್ಟಪ್ರದೇಶಗಳಲ್ಲಿ ಶುಕ್ರವಾರ ಸ್ಥಳೀಯ ಕಾಲಮಾನ ಬೆಳಿಗ್ಗೆ 3 ಗಂಟೆಗೆ ಭೂಕುಸಿತ ಸಂಭವಿಸಿದ್ದು ಸುತ್ತಮುತ್ತಲಿನ ಹಲವು ಹಳ್ಳಿಗಳಲ್ಲೂ ಅಪಾರ ಸಾವು-ನೋವು, ನಾಶ ನಷ್ಟ ಸಂಭವಿಸಿದೆ.

ಶೋಧ ಮತ್ತು ರಕ್ಷಣಾ ತಂಡದ ಕಾರ್ಯಾಚರಣೆಯಲ್ಲಿ ಮಣ್ಣಿನಡಿ ಸಮಾಧಿಯಾಗಿದ್ದ ಹಲವು ದೇಹಗಳನ್ನು ಮೇಲೆತ್ತಲಾಗಿದೆ. ಸುಮಾರು 150 ಮನೆಗಳು ಮಣ್ಣಿನಡಿ ಹೂತುಹೋಗಿರುವುದಾಗಿ ಅಂದಾಜಿಸಲಾಗಿದೆ. ಹಲವೆಡೆ ಇನ್ನೂ ಕುಸಿತ ಮುಂದುವರಿದಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿದ್ದು. ಸಾವು-ನೋವಿನ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ವಲಸೆ ಏಜೆನ್ಸಿ ಅಧಿಕಾರಿ ಸೆರ್ಹಾನ್ ಅಕ್ಟೋಪ್ರಾಕ್ ಮಾಹಿತಿ ನೀಡಿದ್ದಾರೆ.

ಇದೊಂದು ಅಸಾಮಾನ್ಯ ಪ್ರಾಕೃತಿಕ ದುರಂತವಾಗಿದ್ದು 1 ಸಾವಿರಕ್ಕೂ ಅಧಿಕ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಹಲವೆಡೆ ಕೃಷಿ ತೋಟಗಳು ರಾತ್ರಿ ಬೆಳಗಾಗುವುದರಲ್ಲಿ ಭೂಮಿಯ ಒಡಲನ್ನು ಸೇರಿದ್ದು ಅಪಾರ ನಷ್ಟ ಸಂಭವಿಸಿದೆ. ನೀರು ಪೂರೈಕೆ ವ್ಯವಸ್ಥೆಗೆ ಹಾನಿಯಾಗಿದ್ದು, ಹಲವೆಡೆ ಕುಡಿಯುವ ನೀರಿನ ಕೊರತೆ ಎದುರಾಗಿದೆ.

WhatsApp Group Join Now
Telegram Group Join Now
Share This Article