ಡಿ.15ರಂದು ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘದಿಂದ ಬೃಹತ್ ಪ್ರತಿಭಟನೆ

Pratibha Boi
ಡಿ.15ರಂದು ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘದಿಂದ ಬೃಹತ್ ಪ್ರತಿಭಟನೆ
WhatsApp Group Join Now
Telegram Group Join Now
ಚನ್ನಮ್ಮನ ಕಿತ್ತೂರು: ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಸರ್ಕಾರದಿಂದ ಈಡೇರಿಸುವಂತೆ ಆಗ್ರಹಿಸಿ ಡಿಸೆಂಬರ್ 15ರಂದು ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘದ ಆಶ್ರಯದಲ್ಲಿ ರಾಜ್ಯವ್ಯಾಪಿ ಬೃಹತ್ ಪ್ರತಿಭಟನೆ ಜರುಗಲಿದೆ.
ರಾಜ್ಯದ ಮೂಲೆಮೂಲೆಗಳಿಂದ ಸಾವಿರಾರು ಪತ್ರಕರ್ತರು ಈ ಪ್ರತಿಭಟನೆಗೆ ಆಗಮಿಸಲಿದ್ದು, ಪತ್ರಿಕೋದ್ಯಮದ ಹಕ್ಕು, ಸುರಕ್ಷತೆ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಚನ್ನಮ್ಮನ ಕಿತ್ತೂರು ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ಬಸವರಾಜ ಚಿನಗುಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬೃಹತ್ ಪ್ರತಿಭಟನೆ ಬೆಳಗಾವಿ ಸುವರ್ಣ ಸೌಧದ ಎದುರು ಇರುವ ಸುವರ್ಣ ಗಾರ್ಡನ್, ಟೆಂಟ್ ನಂಬರ್ 8ರಲ್ಲಿ ನಡೆಯಲಿದೆ. ಸಂಘದ ನೇತೃತ್ವದಲ್ಲಿ ನಡೆಯಲಿರುವ ಈ ಮಹಾ ಪ್ರತಿಭಟನೆಗೆ ಪತ್ರಕರ್ತರಿಂದ ಭಾರಿ ಬೆಂಬಲ ವ್ಯಕ್ತವಾಗಿದೆ.
WhatsApp Group Join Now
Telegram Group Join Now
Share This Article