ಸತೀಶ್‌ ಜಾರಕಿಹೊಳಿ ಮನೆಯಲ್ಲಿ ಶಾಸಕರ ಸಭೆ!

Ravi Talawar
ಸತೀಶ್‌ ಜಾರಕಿಹೊಳಿ ಮನೆಯಲ್ಲಿ ಶಾಸಕರ ಸಭೆ!
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್​ 5: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಹಿಂದುಳಿದ ವರ್ಗಗಳ ಶಾಸಕರು ಸಭೆ ಸೇರಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್​ನಲ್ಲಿ  ಸಿಎಂ ಹುದ್ದೆ ಕುರಿತ ಚರ್ಚೆ, ಬಣ ಜಗಳ ನಡೆಯುತ್ತಿರುವ ಬೆನ್ನಲ್ಲೇ ಈ ಸಭೆ ನಡೆದಿದೆ. ಸಭೆಯಲ್ಲಿ ಎಸ್​​ಸಿ, ಎಸ್​ಟಿ ಸಮುದಾಯಗಳ ಶಾಸಕರು ಬೇಡಿಕೆ ಪಟ್ಟಿಯನ್ನೇ ಸಿದ್ಧಪಡಿಸಿದ್ದಾರೆ.

ಎಸ್​​ಸಿ, ಎಸ್​ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುವುದು. ಕರ್ನಾಟಕ ರಾಜ್ಯದಲ್ಲಿ ಒಂದು ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸುವುದು. ಸುರಪುರ ತಾಲ್ಲೂಕಿನ ಬಂಡೊಳ್ಳಿಯಲ್ಲಿ ಇರುವ 17 ಎಕರೆ 21 ಗುಂಟೆ ಜಾಗದಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಪ್ರಾರಂಭಿಸಲು ಸುಮಾರು 25.00 ಕೋಟಿ

ಡಿಕೆ ಶಿವಕುಮಾರ್ ಜತೆ ಸಭೆಗೆ ಗೈರು, ಸತೀಶ್ ನಿವಾಸಕ್ಕೆ ರಾಜಣ್ಣ ಹಾಜರ್!

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಎಸ್​ಟಿ ಶಾಸಕರ ಸಭೆಯಲ್ಲಿ ಸಚಿವ ಕೆಎನ್ ರಾಜಣ್ಣ ಭಾಗಿಯಾಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಗಿನ ಸಭೆಗೆ ಗೈರಾಗಿದ್ದ ಅವರು ಸಮುದಾಯದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇದರೊಂದಿಗೆ, ರಾಜಣ್ಣ ಹಾಗೂ ಡಿಕೆ ಶಿವಕುಮಾರ್ ಸಮರ ಮುಂದುವರಿದಂತಾಗಿದೆ.

 

WhatsApp Group Join Now
Telegram Group Join Now
Share This Article