ವೈದ್ಯಕೀಯ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಅಪ್ರಾಪ್ತನ ಬಂಧನ

Ravi Talawar
ವೈದ್ಯಕೀಯ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಅಪ್ರಾಪ್ತನ ಬಂಧನ
WhatsApp Group Join Now
Telegram Group Join Now

ಮಂಗಳೂರು,08: ನಗರದ ಕಸ್ತೂಬಾ ವೈದ್ಯಕೀಯ ಕಾಲೇಜಿನ ಮಹಿಳಾ ವಿಶ್ರಾಂತಿ ಕೊಠಡಿಯೊಳಗೆ ಮೊಬೈಲ್ ಫೋನ್, ಕ್ಯಾಮೆರಾ ಅಳವಡಿಸಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲೇಜಿನ ಅಧಿಕಾರಿಗಳು ಫೋನ್ ಅನ್ನು ಪೊಲೀಸರಿಗೆ ಹಸ್ತಾಂತರಿಸಿದ್ದು, ಫೋನ್‌ನಲ್ಲಿ ಲಭ್ಯವಾದ ವಿವರಗಳ ಆಧಾರದ ಮೇಲೆ ಅಪ್ರಾಪ್ತನನ್ನು ಬಂಧಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೂಕ್ತ ಸೆಕ್ಷನ್ ಅಡಿಯಲ್ಲಿ ನಗರದ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ರೋಗಿಯ ವೇಷ ಧರಿಸಿ ಕಾಲೇಜಿಗೆ ಬಂದಿದ್ದ ಎನ್ನಲಾಗಿದೆ. ಸದ್ಯ ಆತನನ್ನು ನ್ಯಾಯಾಂಗ ಪ್ರಕ್ರಿಯೆಯಂತೆ ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಯಿತು.

WhatsApp Group Join Now
Telegram Group Join Now
Share This Article